Join The Telegram | Join The WhatsApp |
ರಾಯಪುರ್-
ರಾಯ್‌ಪುರದ ಶಹೀದ್ ವೀರ್ ನಾರಾಯಣ ಸಿಂಗ್ ಅಂತರಾಷ್ಟ್ರೀಯ ಕ್ರೀಡಾಂಗಣದ ಪಂದ್ಯದಲ್ಲಿ ಭಾರತವು ನ್ಯೂಜಿಲೆಂಡ್ ವಿರುದ್ಧ 8 ವಿಕೆಟ್ ಗಳ ಭರ್ಜರಿ ಜಯ ಗಳಿಸಿ ಇನ್ನು ಒಂದು ಪಂದ್ಯ ಬಾಕಿ ಇರುವಂತೆ ಸರಣಿ ಜಯ ಗಳಿಸಿದೆ. ಭಾರತದ ಪರ ರೋಹಿತ್ ಶರ್ಮಾ 51, ಶುಭಮನ್ ಗಿಲ್ 40 ರನ್ ಗಳಿಸಿದರು.
ಈ ಮೊದಲು ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು. ಭಾರತದ ಬೌಲಿಂಗ್ ದಾಳಿಗೆ ತತ್ತರಿಸಿದ ಕಿವೀಸ್ ಪಡೆ ಏಕದಿನ ಸರಣಿಯ ಎರಡನೇ ಪಂದ್ಯದಲ್ಲಿ 108 ರನ್‌ಗಳಿಗೆ ಆಲೌಟ್ ಆಯಿತು. ನಾಯಕನ ನಿರೀಕ್ಷೆಗೆ ತಕ್ಕಂತೆ ಬೌಲಿಂಗ್ ಮಾಡಿದ ಶಮಿ ಮೊದಲ ಓವರ್ ನಲ್ಲೇ ವಿಕೆಟ್ ಪಡೆಯುವ ಮೂಲಕ ನ್ಯೂಜಿಲೆಂಡ್‌ಗೆ ಆಘಾತ ನೀಡಿದರು.ಅಂತಿಮವಾಗಿ ಶಮಿ 3 ವಿಕೆಟ, ಹಾರ್ದಿಕ್ ಪಾಂಡ್ಯ, ವಾಷಿಂಗ್ಟನ್ ಸುಂದರ್ ತಲಾ 2 ವಿಕೆಟ್ ಗಳಿಸಿದರು.
ಸಂಕ್ಷಿಪ್ತ ಸ್ಕೋರ್ ವಿವರ-
ನ್ಯೂಜಿಲೆಂಡ್ 34.3 ಓವರುಗಳಲ್ಲಿ 108 ರನ್ ಗಳಿಗೆ ಅಲೌಟ್
ಭಾರತ 20.1 ಓವರುಗಳಲ್ಲಿ 2 ವಿಕೆಟ್ ನಷ್ಟಕ್ಕೆ 111 ರನ್
Join The Telegram | Join The WhatsApp |