ಚೆನ್ನೈ: ಭಾರತದ ಬಲಗೈ ವೇಗದ ಬೌಲರ್ ಜಸ್ಪ್ರೀತ್ ಬೂಮ್ರಾ, ಟೆಸ್ಟ್ ಕ್ರಿಕೆಟ್ನಲ್ಲಿ ಭಾರತದ ಪರ 400 ಅಂತರರಾಷ್ಟ್ರೀಯ ವಿಕೆಟ್ಗಳ ಸಾಧನೆ ಮಾಡಿದ್ದಾರೆ. ಈ ಮೂಲಕ ಭಾರತದ ಈ ವೇಗದ ಬೌಲರ್ ಅಪರೂಪದ ಸಾಧನೆಯನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ.
ಆ ಮೂಲಕ ಈ ಸಾಧನೆ ಮಾಡಿದ ಭಾರತದ ಆರನೇ ವೇಗದ ಬೌಲರ್ ಎನಿಸಿದ್ದಾರೆ. ಒಟ್ಟಾರೆಯಾಗಿ ಭಾರತದ ಪರ 400 ವಿಕೆಟ್ ಗಳಿಸಿದ 10ನೇ ಬೌಲರ್ ಎಂಬ ಗೌರವಕ್ಕೆ ಪಾತ್ರರಾಗಿದ್ದಾರೆ.
ಚೆನ್ನೈನ ಎಂ.ಎ. ಚಿದಂಬರಂ ಕ್ರೀಡಾಂಗಣದಲ್ಲಿ ಬಾಂಗ್ಲಾದೇಶ ವಿರುದ್ಧ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದ ಎರಡನೇ ದಿನದಾಟದಲ್ಲಿ ಬೂಮ್ರಾ ಮಿಂಚಿನ ದಾಳಿ ಸಂಘಟಿಸಿದರು.
400 ವಿಕೆಟ್ಗಳ ಪೈಕಿ ಬೂಮ್ರಾ ಟೆಸ್ಟ್ ಕ್ರಿಕೆಟ್ನಲ್ಲಿ ಈವರೆಗೆ 162 ವಿಕೆಟ್ಗಳನ್ನು ಕಬಳಿಸಿದ್ದಾರೆ. ಏಕದಿನದಲ್ಲಿ 149 ಹಾಗೂ ಟ್ವೆಂಟಿ-20 ಅಂತರರಾಷ್ಟ್ರೀಯ ಕ್ರಿಕೆಟ್ನಲ್ಲಿ 89 ವಿಕೆಟ್ಗಳನ್ನು ಪಡೆದಿದ್ದಾರೆ.
ಭಾರತದ ಪರ ಅಂತರರಾಷ್ಟ್ರೀಯ ಕ್ರಿಕೆಟ್ನಲ್ಲಿ ಅತಿ ಹೆಚ್ಚು ವಿಕೆಟ್ ಗಳಿಸಿದ ಬೌಲರ್ಗಳ ಪಟ್ಟಿಯಲ್ಲಿ ಲೆಗ್ ಸ್ಪಿನ್ ದಿಗ್ಗಜ ಅನಿಲ್ ಕುಂಬ್ಳೆ ಮುಂಚೂಣಿಯಲ್ಲಿದ್ದಾರೆ. ಕುಂಬ್ಳೆ ಒಟ್ಟು 953 ವಿಕೆಟ್ಗಳನ್ನು ಗಳಿಸಿದ್ದಾರೆ. ಎರಡನೇ ಸ್ಥಾನದಲ್ಲಿರುವ ರವಿಚಂದ್ರನ್ ಅಶ್ವಿನ್ ಒಟ್ಟು 744 ವಿಕೆಟ್ ಪಡೆದಿದ್ದಾರೆ.
ಜಸ್ಪ್ರೀತ್ ಬೂಮ್ರಾ ಸೇರಿದಂತೆ ಭಾರತೀಯ ಬೌಲರ್ಗಳ ನಿಖರ ದಾಳಿಗೆ ತತ್ತರಿಸಿದ ಪ್ರವಾಸಿ ಬಾಂಗ್ಲಾದೇಶ ತಂಡವು, ಮೊದಲ ಇನಿಂಗ್ಸ್ನಲ್ಲಿ 47.1 ಓವರ್ಗಳಲ್ಲಿ ಕೇವಲ 149 ರನ್ಗಳಿಗೆ ಆಲೌಟ್ ಆಗಿದೆ.
ಇದರೊಂದಿಗೆ ರೋಹಿತ್ ಶರ್ಮಾ ಬಳಗವು ಮೊದಲ ಇನಿಂಗ್ಸ್ನಲ್ಲಿ 227 ರನ್ಗಳ ಬೃಹತ್ ಮುನ್ನಡೆ ಗಳಿಸಿದೆ. ಎದುರಾಳಿ ಬಾಂಗ್ಲಾಕ್ಕೆ ಫಾಲೋ ಆನ್ ಹೇರುವ ಅವಕಾಶ ಇದ್ದರೂ ಎರಡನೇ ಇನಿಂಗ್ಸ್ ಬ್ಯಾಟಿಂಗ್ ನಡೆಸಲು ಟೀಮ್ ಇಂಡಿಯಾ ನಿರ್ಧರಿಸಿದೆ.
ಬುಮ್ರಾಗೆ ನಾಲ್ಕು ಮತ್ತು ಸಿರಾಜ್, ಆಕಾಶ್ ದೀಪ್ ಮತ್ತು ಜಡೇಜಾಗೆ ತಲಾ ಎರಡು ವಿಕೆಟ್ಗಳು ಬಾಂಗ್ಲಾದೇಶ 149 ರನ್ಗಳಿಗೆ ಆಲೌಟ್ ಆಗಿದೆ.
ಟೆಸ್ಟ್ ಪಂದ್ಯದಲ್ಲಿ ಶತಕದ ಸಾಧನೆ ಮಾಡಿರುವ ಭಾರತದ ಆಲ್ರೌಂಡರ್ ರವಿಚಂದ್ರನ್ ಅಶ್ವಿನ್, 147 ವರ್ಷಗಳ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ವಿಶಿಷ್ಟ ದಾಖಲೆಯೊಂದನ್ನು ಬರೆದಿದ್ದಾರೆ.
ಟೆಸ್ಟ್ ಕ್ರಿಕೆಟ್ನಲ್ಲಿ 30ಕ್ಕೂ ಹೆಚ್ಚು ಸಲ ಐದು ವಿಕೆಟ್ ಸಾಧನೆ (ಇನಿಂಗ್ಸ್ವೊಂದರಲ್ಲಿ) ಮತ್ತು 20ಕ್ಕೂ ಹೆಚ್ಚು ಬಾರಿ 50ಕ್ಕೂ ಹೆಚ್ಚು ರನ್ಗಳ ಸಾಧನೆ ಮಾಡಿದ (ಶತಕ ಸೇರಿದಂತೆ) ವಿಶ್ವದ ಮೊದಲ ಆಟಗಾರ ಎಂಬ ಕೀರ್ತಿಗೆ ಅಶ್ವಿನ್ ಭಾಜನರಾಗಿದ್ದಾರೆ.
ತವರು ಅಂಗಣ ಚೆನ್ನೈನ ಎಂ.ಎ. ಚಿದಂಬರಂ ಕ್ರೀಡಾಂಗಣದಲ್ಲಿ ಅಶ್ವಿನ್ ಈ ಸ್ಮರಣೀಯ ಸಾಧನೆ ಮಾಡಿದ್ದಾರೆ.
ಟೆಸ್ಟ್ ಕ್ರಿಕೆಟ್ನಲ್ಲಿ ಅಶ್ವಿನ್ ಈಗಾಗಲೇ 36 ಸಲ ಐದು ವಿಕೆಟ್ ಸಾಧನೆ ಮಾಡಿದ್ದಾರೆ. ಹಾಗೆಯೇ ಆರು ಶತಕ ಹಾಗೂ 14 ಅರ್ಧಶಕಗಳನ್ನು ಗಳಿಸಿದ್ದಾರೆ.
ಟೆಸ್ಟ್ ಕ್ರಿಕೆಟ್ನಲ್ಲಿ ಎಂಟು ಹಾಗೂ ಅದಕ್ಕಿಂತ ಕೆಳಗಿನ ಕ್ರಮಾಂಕದಲ್ಲಿ ಅತಿ ಹೆಚ್ಚು ಶತಕಗಳನ್ನು ಗಳಿಸಿದ ಬ್ಯಾಟರ್ಗಳ ಪಟ್ಟಿಯಲ್ಲಿ ನ್ಯೂಜಿಲೆಂಡ್ನ ಡೇನಿಯಲ್ ವೆಟೊರಿ (5 ಶತಕ) ನಂತರದ ಸ್ಥಾನದಲಿ ಅಶಿ.ನ್ ಇದ್ದಾರೆ.