ಬೆನೊನಿ (ದಕ್ಷಿಣ ಆಫ್ರಿಕಾ):

19 ವರ್ಷದೊಳಗಿನವರ ಏಕದಿನ ಕ್ರಿಕೆಟ್‌ ವಿಶ್ವಕಪ್ ಟೂರ್ನಿಯ ಫೈನಲ್‌ನಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ಮುಖಾಮುಖಿಯಾಗಿದ್ದು, ಆಸ್ಟೇಲಿಯಾ ಭಾರತಕ್ಕೆ 79 ರನ್ ಗಳಿಂದ ಸೋಲುಣಿಸಿ ಪ್ರಶಸ್ತಿ ಜಯಿಸಿದೆ.

ಟಾಸ್‌ ಗೆದ್ದಿರುವ ಆಸ್ಟ್ರೇಲಿಯಾ ಬ್ಯಾಟಿಂಗ್ ಆಯ್ದುಕೊಂಡಿದೆ. ಆಸ್ಟ್ರೇಲಿಯಾ 50 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 253 ರನ್ ಗಳಿಸಿದೆ.

ಭಾರತೀಯರು ಇಂದು ಅತ್ಯುತ್ತಮ ಬೌಲಿಂಗ್ ಪ್ರದರ್ಶನ ನೀಡಿ ಆಸ್ಟ್ರೇಲಿಯವನ್ನು ಹೆಚ್ಚಿನ ರನ್ ಗಳಿಸಿದಂತೆ ತಡೆಯುವಲ್ಲಿ ಯಶಸ್ವಿಯಾದರು. ಆದರೆ, ಭಾರತ ಈ ಮೊತ್ತ ಬೆನ್ನಟ್ಟುವಲ್ಲಿ ವಿಫಲವಾಯಿತು.

ಐದು ಬಾರಿಯ ಚಾಂಪಿಯನ್‌ ಭಾರತ ತಂಡವು ಮತ್ತೊಮ್ಮೆ ಚಾಂಪಿಯನ್‌ ಪಟ್ಟಕ್ಕೇರುವ ಕನಸಿನೊಂದಿಗೆ ಕಣಕ್ಕಿಳಿದಿತ್ತು.

ಒಂಬತ್ತನೇ ಕ್ರಮಾಂಕದವರೆಗೂ ಬ್ಯಾಟಿಂಗ್ ಮಾಡುವ ಸಮರ್ಥರನ್ನೊಳಗೊಂಡ ಆಸ್ಟ್ರೇಲಿಯಾ 4ನೇ ಬಾರಿ ಟ್ರೋಫಿಗೆ ಮುತ್ತಿಡುವ ಲೆಕ್ಕಾಚಾರದಲ್ಲಿ ಆಡಿದೆ.

ಸಚಿನ್ ದಾಸ್, ಮುಷೀರ್ ಖಾನ್ ಮತ್ತು ಸೂರ್ಯಕುಮಾರ್ ಪಾಂಡೆ ಅವರಂತಹ ಪ್ರತಿಭಾವಂತರು ಭಾರತ ತಂಡದಲ್ಲಿದ್ದರೂ ನಿರೀಕ್ಷಿತ ಪ್ರದರ್ಶನ ತೋರಲಿಲ್ಲ.