ಮಂಗಳೂರು : ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಮಹಾವಿದ್ಯಾಲಯ ಸ್ನಾತಕೋತ್ತರ ಅಧ್ಯಯನ ಹಾಗೂ ಸಂಶೋಧನಾ ಕೇಂದ್ರದಲ್ಲಿ ಇಂದು (ಅ. 28) ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಅಂತರ್ ಕಾಲೇಜು ಸಾಂಸ್ಕೃತಿಕ ಸ್ಪರ್ಧೆ ನಡೆಯಿತು.
ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್, ಕಾಲೇಜಿನ ಹಳೆ ವಿದ್ಯಾರ್ಥಿ ಸಂಘ, ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆ ಘಟಕ, ಸ್ವಚ್ಛ ಪರಿಸರ ಪ್ರತಿಷ್ಠಾನ (ರಿ). ಮಂಗಳೂರು, ಲಯನ್ಸ್ ಕ್ಲಬ್, ಬೆಂದೂರ್ವೆಲ್ ಇವುಗಳ ಸಂಯುಕ್ತ ಆಶ್ರಯದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಉದ್ಘಾಟನಾ ಸಮಾರಂಭದಲ್ಲಿ ದ. ಕ. ಕನ್ನಡ ಸಾಹಿತ್ಯ ಪರಿಷತ್ ಗೌರವ ಕಾರ್ಯದರ್ಶಿ ವಿನಯ್ ಆಚಾರ್ಯ, ಮಂಗಳೂರು ವಿ.ವಿ. ರಾಷ್ಟ್ರೀಯ ಸೇವಾ ಯೋಜನೆ ಸಂಯೋಜನಾಧಿಕಾರಿಗಳಾದ ಡಾ. ಶೇಷಪ್ಪ ಅಮೀನ್, ಎಸ್.ಡಿ.ಎಂ. ಕಾನೂನು ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಡಾ. ದೇವರಾಜ್ ಕೆ., ಸ್ವಚ್ಛ ಪರಿಸರ ಪ್ರತಿಷ್ಠಾನದ ಟ್ರಸ್ಟಿ ಸಂತೋಷ್ ಕುಮಾರ್ ಶೆಟ್ಟಿ, ಬೆಂದೂರ್ವೆಲ್ ಲಯನ್ಸ್ ಕ್ಲಬ್ ಅಧ್ಯಕ್ಷ ರಾಮ್ ಗಣೇಶ್ ಮುಖ್ಯ ಅತಿಥಿಗಳಾಗಿದ್ದರು.
ಕಾಲೇಜಿನ ಉಪ ಪ್ರಾಂಶುಪಾಲೆ ಡಾ. ಬಾಲಿಕ ಅಧ್ಯಕ್ಷತೆ ವಹಿಸಿದ್ದರು.
ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿಗಳಾದ ಪ್ರೊ| ಪುಷ್ಪರಾಜ್ ಕೆ ಮತ್ತು ಡಾ. ಡಿಂಪಲ್ ಮೆಸ್ತಾ, ಸಹಾಯಕ ಯೋಜನಾಧಿಕಾರಿ ಅಪೂರ್ವ ಶೆಟ್ಟಿ, ಘಟಕ ನಾಯಕರಾದ ದೀಪ್ತಿ ಬಂಗೇರ ಮತ್ತು ತೇಜಸ್, ವಿದ್ಯಾರ್ಥಿ ಸಂಘದ ಮುಖ್ಯ ಕಾರ್ಯದರ್ಶಿ ಸತ್ಯಾತ್ಮ ಭಟ್ ಉಪಸ್ಥಿತರಿದ್ದರು.
-
ಫಲಿತಾಂಶ:ಭಾಷಣ ಸ್ಪರ್ಧೆಯಲ್ಲಿ ಎಸ್. ಡಿ. ಎಂ. ಉದ್ಯಮಾಡಳಿತ ಕಾಲೇಜು, ಮಂಗಳೂರು ಪ್ರಥಮ ಸ್ಥಾನ ಪಡೆದರೆ, ಕೆನರಾ ಕಾಲೇಜ್, ಮಂಗಳೂರು ದ್ವಿತೀಯ ಸ್ಥಾನ ತನ್ನದಾಗಿಸಿಕೊಂಡಿತು. ಸಮೂಹ ಗಾಯನ ಸ್ಪರ್ಧೆಯಲ್ಲಿ ಮ್ಯಾಪ್ಸ್ ಕಾಲೇಜು ಮಂಗಳೂರು ಪ್ರಥಮ ಸ್ಥಾನ ಪಡೆದರೆ, ಎಸ್. ಡಿ. ಎಂ. ಉದ್ಯಮಾಡಳಿತ ಕಾಲೇಜು, ಮಂಗಳೂರು ದ್ವಿತೀಯ ಸ್ಥಾನ ಪಡೆಯಿತು. ಸಮೂಹ ನೃತ್ಯ ಸ್ಪರ್ಧೆಯಲ್ಲಿ ಕೆನರಾ ಕಾಲೇಜ್, ಮಂಗಳೂರು ಪ್ರಥಮ ಸ್ಥಾನ ಪಡೆದರೆ ಡಾ. ಪಿ. ದಯಾನಂದ ಪೈ ಮತ್ತು ಸತೀಶ್ ಪೈ ಸರಕಾರಿ ಪ್ರಥಮ ದರ್ಜೆ ಕಾಲೇಜು, ಮಂಗಳೂರು ದ್ವಿತೀಯ ಸ್ಥಾನ ತನ್ನದಾಗಿಸಿಕೊಂಡಿತು.