Join The Telegram | Join The WhatsApp |
ಬೆಳಗಾವಿ-
ಬೆಳಗಾವಿ ನಗರದ ಪ್ರತಿಷ್ಠಿತ ಕೆ ಎಲ್ ಇ ಸಂಸ್ಥೆಯ ರಾಜಾ ಲಖಮಗೌಡ ಪದವಿ ಪೂರ್ವ ವಿಜ್ಞಾನ ಮಹಾವಿದ್ಯಾಲಯದಲ್ಲಿ ದಿನಾಂಕ 06/ 12 /2022 ರಂದು ಬೆಳಿಗ್ಗೆ 10 ಗಂಟೆಗೆ ಸರ್ ಸಿ ವಿ ರಾಮನ್ ಸಭಾಂಗಣದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಿರುವ ಅಂತರ್ ಶಾಲಾ ವಿಜ್ಞಾನ ವಸ್ತು ಪ್ರದರ್ಶನ ಸೈನ್ಸಿಯಾ ವೆನಾರಿ 3.0 ಕಾರ್ಯಕ್ರಮ ಏರ್ಪಡಿಸಲಾಗಿದೆ.
ಈ ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಬೆಳಗಾವಿ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ರಸಾಯನಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ. ಮಂಜಣ್ಣ ಅವರು ಆಗಮಿಸಲಿದ್ದಾರೆ . ಈ ಕಾರ್ಯಕ್ರಮಕ್ಕೆ ಗೌರವಾನ್ವಿತ ಅತಿಥಿಗಳಾಗಿ ಬೆಂಗಳೂರು ಕರ್ನಾಟಕ ಸರ್ಕಾರ ಮಾಜಿ ಮುಖ್ಯ ಸಚೇತಕರಾದ ಮಹಾಂತೇಶ್ ಎಂ ಕವಟಗಿಮಠ ಅವರು ಆಗಮಿಸಲಿದ್ದಾರೆ. ಈ ಸಮಾರಂಭದ ಅಧ್ಯಕ್ಷತೆಯನ್ನು ಆರ್ ಎಲ್ ಎಸ್ ಕಾಲೇಜಿನ ಸ್ಥಾನಿಕ ಆಡಳಿತ ಮಂಡಳಿ ಕಾರ್ಯಾಧ್ಯಕ್ಷರಾದ ಎಲ್ ವಿ ದೇಸಾಯಿ ಅವರು ವಹಿಸಲಿದ್ದಾರೆ. ಈಗಾಗಲೇ ಜಿಲ್ಲೆಯ ನೂರಕ್ಕೂ ಹೆಚ್ಚು ಪ್ರೌಢಶಾಲೆಗಳಿಗೆ ಸಂದರ್ಶಿಸಿ ಮಾಹಿತಿ ನೀಡಲಾಗಿದೆ. ಎಲ್ಲ ಪ್ರೌಢಶಾಲೆಗಳ ಮುಖ್ಯೋಪಾಧ್ಯರು ಆಸಕ್ತಿವಹಿಸಿ ತಮ್ಮ ಶಾಲೆಗಳಿಂದ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳನ್ನು ಸ್ಪರ್ಧೆಯಲ್ಲಿ ಭಾಗವಹಿಸುವಂತೆ ಪ್ರೇರಣೆ ನೀಡಿ ಸದುಪಯೋಗ ಪಡೆದುಕೊಳ್ಳಬೇಕೆಂದು ಈ ಮೂಲಕ ಕಾಲೇಜಿನ ಪ್ರಾಚಾರ್ಯರಾದ ವಿ ಸಿ ಕಾಮಗೋಳ ಅವರು ಪ್ರಕಟಣೆಯಲ್ಲಿ ವಿನಂತಿಸಿಕೊಂಡಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಡಾ.ಎಸ್ ಎಂ ಜವಳಿ 9739865832 ಹಾಗೂ ಶ್ರೀನಾಥ್ ಜೋಶಿ 90351792860 ಅವರನ್ನು ಸಂಪರ್ಕಿಸಲು ಕೋರಲಾಗಿದೆ.
Join The Telegram | Join The WhatsApp |