ಹುಬ್ಬಳ್ಳಿ : ನಾಡಿನ ಹಿರಿಯ ಸಾಹಿತಿ ಡಾ. ಸಂಗಮೇಶ ಹಂಡಿಗಿ ಅವರ ಸ್ಮರಣೆಯಲ್ಲಿ ಪ್ರತಿಷ್ಠಾಪನೆಗೊಂಡ ಡಾ. ಸಂಗಮೇಶ ಹಂಡಿಗಿ ಸಾಹಿತ್ಯ ಪ್ರತಿಷ್ಠಾನದ ವತಿಯಿಂದ ಈ ವರ್ಷ ಕಾವ್ಯ ಕ್ಷೇತ್ರದಲ್ಲಿನ ಸಾಧಕರಿಗೆ ರಾಜ್ಯಮಟ್ಟದ “ಸಂಗಮ ಸಿರಿ” ಪ್ರಶಸ್ತಿ ನೀಡಲು ನಿರ್ಧರಿಸಲಾಗಿದೆ.

ಈ ಪ್ರಶಸ್ತಿಯು 10,000 ರೂ. ನಗದು ಹಾಗೂ ಪ್ರಶಸ್ತಿ ಫಲಕವನ್ನು ಒಳಗೊಂಡಿರುತ್ತದೆ. ಎರಡು ವರ್ಷ ಈ ಪ್ರತಿಷ್ಠಾನದಿಂದ ವಚನ ಸಾಹಿತ್ಯದಲ್ಲಿನ ಸಾಧಕರಿಗೆ ಪ್ರಶಸ್ತಿ ನೀಡಲಾಗಿತ್ತು.ಈ ವರ್ಷ ಕಾವ್ಯ ಕ್ಷೇತ್ರಕ್ಕೆ ನೀಡಲು ನಿರ್ಧರಿಸಲಾಗಿದೆ. 2023ರ ಸಾಲಿನಲ್ಲಿ ಪ್ರಕಟಗೊಂಡ ಕವನ ಸಂಕಲನದ ಎರಡು ಪ್ರತಿಗಳನ್ನು ಕಳುಸಿಕೊಡಬೇಕು. ಕವನ ಸಂಕಲನದ ಪುಸ್ತಕಗಳನ್ನು ಆಗಸ್ಟ್‌ 16ರ ಒಳಗೆ ಡಾ.ಸಂಗಮೇಶ ಹಂಡಿಗಿ ಸಾಹಿತ್ಯ ಪ್ರತಿಷ್ಠಾನ, ಮನೆ ನಂ.338 ಎರಡನೇ ಹಂತ ಗೋಕುಲ ರಸ್ತೆ,ಹುಬ್ಬಳ್ಳಿ ಇಲ್ಲಿಗೆ ಕಳುಹಿಸಿಕೊಡಲು ಕೋರಲಾಗಿದೆ ಮಾಹಿತಿಗೆ ಮೊ.9060933596, 9986476733 ಗೆ ಸಂಪರ್ಕಿಸಬಹುದು ಎಂದು ಪ್ರತಿಷ್ಠಾನದ ಅಧ್ಯಕ್ಷ ಜಿ.ಬಿ. ಗೌಡಪ್ಪಗೊಳ, ಗೌರವಾಧ್ಯಕ್ಷ ಗಣಪತಿ ಗಂಗೊಳ್ಳಿ ತಿಳಿಸಿದ್ದಾರೆ.