ಹೆಬ್ರಿ: ಕನ್ನಡ ಸಾಹಿತ್ಯ ಪರಿಷತ್ ಹೆಬ್ರಿ ತಾಲ್ಲೂಕು ಘಟಕದ ವತಿಯಿಂದ ಶಿವಪುರದಲ್ಲಿ ನಡೆಯುವ 5ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವಿರೇಂದ್ರ ಹೆಗ್ಗಡೆ ಅವರನ್ನು ಬುಧವಾರ ಆಮಂತ್ರಿಸಲಾಯಿತು.

ಕನ್ನಡ ಸಾಹಿತ್ಯ ಪರಿಷತ್ ಹೆಬ್ರಿ ತಾಲ್ಲೂಕು ಘಟಕ ಅಧ್ಯಕ್ಷ ಶ್ರೀನಿವಾಸ ಭಂಡಾರಿ ಮುದ್ದೂರು, ಸ್ವಾಗತ ಸಮಿತಿಯ ಗೌರವ ಸಲಹೆಗಾರರ ಮೂರ್ಸಾಲು ಮೋಹನದಾಸ ನಾಯಕ್, ಕಾರ್ಯದರ್ಶಿ ರಾಘವೇಂದ್ರ ಪ್ರಭು, ಬಾಲಚಂದ್ರ ಮುದ್ರಾಡಿ, ನಾಭಿರಾಜ ಪೂವಣಿ ಭಾಗವಹಿಸಿದ್ದರು.