ಅಯೋಧ್ಯೆ: ಭಾರತದಲ್ಲಿನ ಇಸ್ರೇಲ್ ರಾಯಭಾರಿ ರುವೆನ್ ಅಜರ್ ಅವರು ತಮ್ಮ ಪತ್ನಿಯೊಂದಿಗೆ ಬುಧವಾರ ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡಿದ್ದಾರೆ. ಮಂಗಳವಾರ ಲಖನೌದಲ್ಲಿ ಉತ್ತರ ಪ್ರದೇಶದ ಮುಖ್ಯ ಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ರುವೆನ್ ಬುಧವಾರ ಆಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡಿದ್ದಾರೆ. ನಂತರ ಬಸ್ತಿ ಜಿಲ್ಲೆ ಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಹಾಜರಾಗಿದ್ದರು.