ಬೆಳಗಾವಿ: ಬೆಳಗಾವಿ ಲೋಕಸಭಾ ಮತಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಅಭೂತಪೂರ್ವ ಗೆಲುವು ಸಾಧಿಸಿದ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರು ಬೆಳಗಾವಿಯಲ್ಲಿ ಇಂದು ಮಹತ್ವದ ಸುದ್ದಿಗೋಷ್ಠಿ ನಡೆಸಿದರು. ಈ ಸಂದರ್ಭದಲ್ಲಿ ಅವರು ತಮ್ಮ ಗೆಲುವಿಗೆ ಸಹಕರಿಸಿದವರು ಯಾರು ಎಂಬ ಸುಳಿವು ನೀಡಿದರು. ಜತೆಗೆ ಮುಂದಿನ ದಿನಗಳಲ್ಲಿ ಅವರ ಹೆಸರು ಹೇಳುವುದಾಗಿ ಕುತೂಹಲ ಮೂಡಿಸಿದರು. ಚುನಾವಣೆ ಸಂದರ್ಭದಲ್ಲಿ ಎದುರಾಳಿ ಅಭ್ಯರ್ಥಿ ಮೃಣಾಲ್ ಹೆಬ್ಬಾಳಕರ ಅವರ ತಾಯಿ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಬೆಳಗಾವಿಯಲ್ಲಿ ಜಗದೀಶ ಶೆಟ್ಟರ್ ತಮ್ಮ ಅಡ್ರೆಸ್ ತಿಳಿಸಲಿ, ಜಗದೀಶ ಶೆಟ್ಟರ್ ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಬೆಳಗಾವಿಯನ್ನು ನಿರ್ಲಕ್ಷಿಸಿದ್ದರು ಎಂದು ಆರೋಪಗಳ ಸುರಿಮಳೆಗೈದಿದ್ದರು. ಆದರೆ, ಜಗದೀಶ ಶೆಟ್ಟರ್ ಅವರು ಲಕ್ಷ್ಮೀ ಹೆಬ್ಬಾಳ್ಕರ್ ಅವರ ಆರೋಪಗಳಿಗೆ ತಲೆ ಕೆಡಿಸಿಕೊಂಡಿರಲಿಲ್ಲ. ಮತದಾರರು ಕೊನೆಗೂ ಜಗದೀಶ ಶೆಟ್ಟರ್ ಅವರಿಗೆ ಮುಂದಿನ ಐದು ವರ್ಷಗಳ ಕಾಲ ಬೆಳಗಾವಿ ಪ್ರತಿನಿಧಿಸುವ ಜವಾಬ್ದಾರಿಯನ್ನು ವಹಿಸಿಕೊಟ್ಟಿದ್ದಾರೆ.

ಚುನಾವಣೆಯಲ್ಲಿ ಒಳ ಹೊಡೆತ, ಹೊರ ಹೊಡೆತಗಳೆರಡೂ ಇರ್ತಾವೆ. ಚುನಾವಣೆಯಲ್ಲಿ ಪರೋಕ್ಷವಾಗಿ ಸಹಾಯ ಮಾಡಿದವರಿಗೆ ಧನ್ಯವಾದ ಸಲ್ಲಿಸುವೆ ಎಂದು ಬೆಳಗಾವಿ ನೂತನ ಸಂಸದ ಜಗದೀಶ್ ಶೆಟ್ಟರ್ ಅಚ್ಚರಿ ಹೇಳಿಕೆ ನೀಡಿದರು.

ಇಂದು(ಗುರುವಾರ) ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಜಗದೀಶ್ ಶೆಟ್ಟರ್, ನನಗೆ ಬೆಂಬಲಿಸಿದ ಬೇರೆ ಪಕ್ಷದವರ ಹೆಸರು ಈಗ ಬೇಡ, ಇನ್ನೊಮ್ಮೆ ಹೇಳ್ತಿನಿ. ಎಲ್ಲ ಪಕ್ಷದ ನಾಯಕರು, ಎಲ್ಲ ಭಾಷಿಕರು ನನ್ನ ಬೆಂಬಲಕ್ಕೆ ನಿಂತರು ಎಂದು ತಮ್ಮ ಎಂದಿನ ದಾಟಿಯಲ್ಲಿ ಹೇಳಿದ್ದಾರೆ.

ನನ್ನ ಗೆಲುವಿನಲ್ಲಿ ನಾಲ್ಕು ಗೇಮ್ ಚೇಂಜರ್‌ಗಳಿವೆ. ಮಾರ್ಚ್ 27 ಕ್ಕೆ ಬಂದಾಗ ಬೆಳಗಾವಿ ಜನ ಅಭೂತಪೂರ್ವ ಸ್ವಾಗತ ಕೋರಿದರು. ಏಪ್ರಿಲ್ 17 ರಂದು ನಡೆದ ನಾಮಪತ್ರ ಸಲ್ಲಿಕೆ ವೇಳೆ ಜನ ಸೇರಿದ್ದು, ಪ್ರಧಾನಿ ನರೇಂದ್ರ ಮೋದಿ ಬೆಳಗಾವಿಯಲ್ಲಿ ಬೃಹತ್ ಸಮಾವೇಶ ನಡೆಸಿದ್ದು, ದಿ. ಸುರೇಶ್‌ ಅಂಗಡಿ ಅವರ 16 ವರ್ಷಗಳ ಕಾಲ ಸಲ್ಲಿಸಿದ ಸೇವೆಯೇ ನನಗೆ ಗೇಮ್ ಚೇಂಜರ್ ಎಂದು ಶೆಟ್ಟರ್ ತಿಳಿಸಿದ್ದಾರೆ.

ಗ್ಯಾರಂಟಿ ಯೋಜನೆಗಳನ್ನು ಸ್ಥಗಿತಗೊಳಿಸುವ ಸಂಬಂಧ ಕಾಂಗ್ರೆಸ್ ‌ಶಾಸಕರ ಆಗ್ರಹ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಜಗದೀಶ್‌ ಶೆಟ್ಟರ್‌, ಲೋಕಸಭೆ ಚುನಾವಣೆ ರಾಷ್ಟ್ರೀಯತೆ, ರಾಷ್ಟ್ರದ ನಾಯಕತ್ವ ಮೇಲೆ ನಡೆಯುತ್ತದೆ. ಗ್ಯಾರಂಟಿ ಯೋಜನೆಗಳ ಜಾರಿಯಿಂದ ನಾವು ಗೆಲ್ಲುತ್ತೇವೆಂಬ ಭ್ರಮೆಯಲ್ಲಿ ಕಾಂಗ್ರೆಸ್ ನಾಯಕರಿದ್ದರು. ಗ್ಯಾರಂಟಿ ಮೇಲೆ ಗೆಲ್ಲುವ ಭರವಸೆ ಹೊಂದಿದ್ದ ಕಾಂಗ್ರೆಸ್ ‌ನಾಯಕರಿಗೆ ನಿರಾಸೆ ಆಗಿದೆ. ಕಾಂಗ್ರೆಸ್ ಶಾಸಕರೇ ಈಗ ಗ್ಯಾರಂಟಿ ಯೋಜನೆಗಳಿಗೆ ವಿರೋಧ ಮಾಡುತ್ತಿದ್ದಾರೆ. ಈಗ ಕಾಂಗ್ರೆಸ್‌ನಲ್ಲಿ ಆಂತರಿಕವಾಗಿ ಗ್ಯಾರಂಟಿಗಳಿಗೆ ವಿರೋಧ ವ್ಯಕ್ತವಾಗ್ತಿದೆ. ಗ್ಯಾರಂಟಿ ಯೋಜನೆಗಳ ಜಾರಿಯಿಂದ ಯಾವ ಕಾಂಗ್ರೆಸ್ ಶಾಸಕರು ಖುಷಿಯಿಲ್ಲ. ಶಾಸಕರ ಒತ್ತಡಕ್ಕೆ ಮಣಿದು ಬಹುಶಃ ಸಿಎಂ ಸಿದ್ದರಾಮಯ್ಯ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಬಹುದು ಎಂದು ಹೇಳಿದ್ದಾರೆ.

ಲೋಕಸಭೆ ‌ಚುನಾವಣೆ ಬಳಿಕ ಬೆಳಗಾವಿ ಕಾಂಗ್ರೆಸ್‌ನಲ್ಲಿ ಭಿನ್ನಮತ ವಿಚಾರದ ಬಗ್ಗೆ ಮಾತನಾಡಿದ ಶೆಟ್ಟರ್‌, ಲಕ್ಷ್ಮಣ ಸವದಿ ನನ್ನ ಸಂಪರ್ಕ ಮಾಡಿಲ್ಲ. ಕಾಂಗ್ರೆಸ್ ಒಳಜಗಳ ಅವರ ಹಣೆಬರಹ ಎಂದು ಹೇಳಿದ್ದಾರೆ.
ಗ್ಯಾರಂಟಿ ಯೋಜನೆಗಳನ್ನು ಸ್ಥಗಿತಗೊಳಿಸುವ ಸಂಬಂಧ ಕಾಂಗ್ರೆಸ್ ‌ಶಾಸಕರ ಆಗ್ರಹ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಜಗದೀಶ್‌ ಶೆಟ್ಟರ್‌, ಲೋಕಸಭೆ ಚುನಾವಣೆ ರಾಷ್ಟ್ರೀಯತೆ, ರಾಷ್ಟ್ರದ ನಾಯಕತ್ವ ಮೇಲೆ ನಡೆಯುತ್ತದೆ. ಗ್ಯಾರಂಟಿ ಯೋಜನೆಗಳ ಜಾರಿಯಿಂದ ನಾವು ಗೆಲ್ಲುತ್ತೇವೆಂಬ ಭ್ರಮೆಯಲ್ಲಿ ಕಾಂಗ್ರೆಸ್ ನಾಯಕರಿದ್ದರು. ಗ್ಯಾರಂಟಿ ಮೇಲೆ ಗೆಲ್ಲುವ ಭರವಸೆ ಹೊಂದಿದ್ದ ಕಾಂಗ್ರೆಸ್ ‌ನಾಯಕರಿಗೆ ನಿರಾಸೆ ಆಗಿದೆ. ಕಾಂಗ್ರೆಸ್ ಶಾಸಕರೇ ಈಗ ಗ್ಯಾರಂಟಿ ಯೋಜನೆಗಳಿಗೆ ವಿರೋಧ ಮಾಡುತ್ತಿದ್ದಾರೆ. ಈಗ ಕಾಂಗ್ರೆಸ್‌ನಲ್ಲಿ ಆಂತರಿಕವಾಗಿ ಗ್ಯಾರಂಟಿಗಳಿಗೆ ವಿರೋಧ ವ್ಯಕ್ತವಾಗ್ತಿದೆ. ಗ್ಯಾರಂಟಿ ಯೋಜನೆಗಳ ಜಾರಿಯಿಂದ ಯಾವ ಕಾಂಗ್ರೆಸ್ ಶಾಸಕರು ಖುಷಿಯಿಲ್ಲ. ಶಾಸಕರ ಒತ್ತಡಕ್ಕೆ ಮಣಿದು ಬಹುಶಃ ಸಿಎಂ ಸಿದ್ದರಾಮಯ್ಯ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಬಹುದು ಎಂದು ಹೇಳಿದ್ದಾರೆ.

ಬೆಳಗಾವಿಯಲ್ಲಿ ಜಗದೀಶ್ ಶೆಟ್ಟರ್ ಗೆಲುವಿಗೆ ಯಾವ್ಯಾವ ಪಕ್ಷದ ನಾಯಕರು ಬೆಂಬಲ ಸೂಚಿಸಿದ್ದಾರೆ ಎಂಬ ಕುತೂಹಲ ಹೆಚ್ಚಾಗಿದೆ. ಇದಕ್ಕೆಲ್ಲಾ ಅವರೇ ಉತ್ತರ ಹೇಳಬೇಕಿದೆ.