ಬೆಳಗಾವಿ: ನಮ್ಮಲ್ಲಿ ಹಿಂದೂ- ಮುಸ್ಲಿಂ ಬೇಧಬಾವ ಇಲ್ಲ. ಎಲ್ಲರೂ ಒಗ್ಗಟ್ಟಿನಿಂದ 28 ಕ್ಷೇತ್ರಗಳಲ್ಲಿ ಗೆಲ್ತಿವಿ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು. ಬುಧವಾರ ಬೆಳಗಾವಿಯಲ್ಲಿ ಮಾತನಾಡಿದ ಅವರು, ಬೆಳಗಾವಿಯಲ್ಲಿ ಜಾತಿ ಆಧಾರದ ಮೇಲೆ ಏನಾದರೂ ಮಾಡಿಕೊಳ್ಳಲಿ, ನಾವು ಹಿಂದೂ, ಮುಸ್ಲಿಂ ಬೇಧ ಭಾವ ಇಲ್ಲ ಎಲ್ಲರ ಬೆಂಬಲದೊಂದಿಗೆ ಗೆಲ್ಲೇವಿ.ಸಂಗಣ್ಣ ಕರಡಿ ಅವರನ್ನು ಇವತ್ತು ಹೋಗಿ ಅವರನ್ನು ಭೇಟಿಯಾಗಿ ಮಾತನಾಡಬೇಕು ಅಂದುಕೊಂಡೆ. ಇಂತಹ ಘಟನೆಗಳು ಸ್ವಾಭಾವಿಕ.
ನಮಗೆ ಈಗಿನ ವಾತಾವರಣ ಎಲ್ಲಾ ಕಡೆಗಳಲ್ಲಿ ಅನುಕೂಲಕರವಾಗಿದೆ.
ನಾನು ಈ ಹಿಂದೆ ಹೇಳಿದಂತೆ 28ಕ್ಕೆ 28 ಕ್ಷೇತ್ರ ಗೆಲ್ಲುವ ದೃಷ್ಟಿಯಿಂದ ಕೆಲಸ ಮಾಡ್ತಿದ್ದೇವೆ.
ಅದರಲ್ಲಿ ನಾವು ಯಶಸ್ವಿಯಾಗುತ್ತೇವೆ ಎಂಬ ವಿಶ್ವಾಸ ಇದೆ ಎಂದರು.