ಬೆಳಗಾವಿ: ಬೆಳಗಾವಿ ಲೋಕಸಭಾ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ರವಿವಾರ ಬೆಳಗ್ಗೆ ರಾಜ್ಯಸಭೆಯ ಮಾಜಿ ಸದಸ್ಯ ಹಾಗೂ ಕೆಎಲ್ ಇ ಸಂಸ್ಥೆ ಕಾರ್ಯಾಧ್ಯಕ್ಷ ಡಾ. ಪ್ರಭಾಕರ ಕೋರೆಯವರನ್ನು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದ್ದಾರೆ.

ಬೆಳಗಾವಿ ಲೋಕಸಭಾ ಮತಕ್ಷೇತ್ರದಲ್ಲಿ ಈ ಬಾರಿ ಬಿಜೆಪಿ ಗೆಲ್ಲಲೇ ಬೇಕು, ಈ ನಿಟ್ಟಿನಲ್ಲಿ ಅಗತ್ಯವಾದ ರಣತಂತ್ರವನ್ನು ಹೆಣೆದ ಇಬ್ಬರು ನಾಯಕರು ಕೆಲ ಹೊತ್ತು ಚುನಾವಣೆಯ ಕುರಿತು ಚರ್ಚಿಸಿದರು. ಬಿಜೆಪಿ ರಾಜ್ಯ ಉಪಾಧ್ಯಕ್ಷ ಹಾಗೂ ಮಾಜಿ ಶಾಸಕ ಅನಿಲ್ ಬೆನಕೆ ಸೇರಿದಂತೆ ಹಲವು ನಾಯಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.