Join The Telegram | Join The WhatsApp |
ಬೆಳಗಾವಿ:
ಚಳಿಗಾಲದ ಅಧಿವೇಶನದ ಸಲುವಾಗಿ ಬೆಳಗಾವಿಗೆ ಆಗಮಿಸಿದಂತಹ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರಿಗೆ ಜೈನ ಯುವ ಸಂಘಟನೆ ಪದಾಧಿಕಾರಿಗಳಿಂದ ಮನವಿ ಪತ್ರವನ್ನು ಸೋಮವಾರದಂದು ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಸಲ್ಲಿಸಲಾಯಿತು.
ಮನವಿ ಪತ್ರದಲ್ಲಿ ಸಮ್ಮೇದ ಶಿಖರಜಿಯನ್ನು ಪ್ರವಾಸಿ ತಾಣವಾಗಿಸುವ ನಿರ್ಧಾರವನ್ನು ಹಿಂಪಡೆಯಲು ಕೇಂದ್ರ ಸರ್ಕಾರಕ್ಕೆ ಒತ್ತಡ ಹೇರುವುದು, ಜೈನ ಧರ್ಮೀಯರಿಗೆ ಮೀಸಲಾತಿ ಒದಗಿಸುವುದು, ಜೈನ ಅಭಿವೃದ್ಧಿ ಪ್ರಾಧಿಕಾರ ಸ್ಥಾಪನೆ, ಪ್ರಾಚೀನ ಜೈನ ಬಸದಿಗಳು, ಶಾಸನಗಳು ಮತ್ತು ಅವುಗಳ ಸಂರಕ್ಷಣೆ ಮತ್ತು ನಿರ್ವಹಣೆ ಸೇರಿದಂತೆ ಇನ್ನೂ ಹಲವು ಬೇಡಿಕೆಗಳ ಕುರಿತು ಮನವಿ ಸಲ್ಲಿಸಲಾಯಿತು.
ಮುಖ್ಯಮಂತ್ರಿಗಳು ಮನವಿಗೆ ಸಕಾರಾತ್ಮಕ ಪ್ರತಿಕ್ರಿಯೆ ನೀಡಿದರು. ಶಾಸಕ ಅಭಯ ಪಾಟೀಲ ಸೇರಿದಂತೆ ಜೈನ ಯುವ ಸಂಘಟನೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.
Join The Telegram | Join The WhatsApp |