ಶಿವಮೊಗ್ಗ: ಈಶ್ವರಪ್ಪ ಪುತ್ರ ಕಾಂತೇಶ್ ಗೆ ಬಿಜೆಪಿಯಿಂದ ಹಾವೇರಿ ಗದಗ ಲೋಕಸಭಾ ಚುನಾವಣೆಗೆ ಟಿಕೆಟ್ ಮಿಸ್ ಆದ ಬೆನ್ನಲ್ಲೇ ಮಾಜಿ ಸಚಿವ ರಮೇಶ್ ಜಾರಕಿಹೊಳೆ ಅವರ ಮನೆಗೆ ಶುಕ್ರವಾರ ಸಂಜೆ ಭೇಟಿ ನೀಡಿದ್ದಾರೆ.

ಮಲ್ಲೇಶ್ವರ ನಗರದಲ್ಲಿರುವ ಮನೆಯಲ್ಲಿ  ಪುತ್ರ  ಕಾಂತೇಶ್ ಜೊತೆಗೆ ಮಾತುಕತೆ ನಡೆಸಿದ ಜಾರಕಿಹೊಳಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ್ದಾರೆ. ಈಶ್ವರಪ್ಪ ಜೊತೆ ಟಿಕೆಟ್ ಅಸಮಾಧಾನ ಕುರಿತು ಚರ್ಚೆ ನಡೆಸಿದ್ದೇನೆ. ಈಶ್ವರಪ್ಪ ಅವರನ್ನು ಮನವೊಲಿಸುವ ಪ್ರಯತ್ನ ನಡೆದಿದೆ ಎಂದರು.
ಇನ್ನೂ ಸಮಯ ಮೀರಿಲ್ಲ. ನಾನು ಟಿಕೆಟ್ ವಿಚಾರವಾಗಿ ದೆಹಲಿಗೆ ಹೋಗಿ ವರಿಷ್ಠರ ಜೊತೆ ಚರ್ಚೆ ನಡೆಸುತ್ತೇನೆ.  ಸಾಕಷ್ಟು ಬದಲಾವಣೆಗೆ ಅವಕಾಶ ಇದೆ. ಈಶ್ವರಪ್ಪ ಅವರಿಗೆ ಪದೇ ಪದೇ ಅನ್ಯಾಯ ಆಗುತ್ತಿದೆ .
ಇದನ್ನು ಸರಿಪಡಿಸಬೇಕು ಎಂದು ಈಶ್ವರಪ್ಪ ಪರ ಬ್ಯಾಟಿಂಗ್ ಮಾಡಿದ್ದಾರೆ.
ಎಲ್ಲವೂ ಸರಿ ಆಗುತ್ತದೆ ಎನ್ನುವ ವಿಶ್ವಾಸ ಇದೆ. ಈಗಲೂ ಕಾಂತೇಶ್ ಗೆ ಹಾವೇರಿ ಟಿಕೇಟ್ ನೀಡಲು ಅವಕಾಶ ಇದೆ ಎಂದ ಜಾರಕಿಹೊಳಿ, ಬೆಳಗಾವಿ ಲೋಕಸಭೆ ಕ್ಷೇತ್ರದ ಅಭ್ಯರ್ಥಿ ಜಗದೀಶ್ ಶೆಟ್ಟರ್ ಆಗೋದಕ್ಕೆ ಪರೋಕ್ಷವಾಗಿ ವಿರೋಧ ವ್ಯಕ್ತಪಡಿಸಿದ್ದಾರೆ. ಸ್ಥಳೀಯ ಅಭ್ಯರ್ಥಿಗೆ ಆದ್ಯತೆ ನೀಡಬೇಕು. ಸ್ಥಳೀಯವಾಗಿ ಸಂಜಯ್ ಪಾಟೀಲ್, ಹಾಲಿ ಸಂಸದೆ ಮಂಗಳಾ ಅಂಗಡಿ ಇದ್ದಾರೆ. ಶೆಟ್ಟರ್ ಗೆ  ಟಿಕೆಟ್ ಫೈನಲ್ ಆಗಿಲ್ಲ. ನಾವು ಸ್ಥಳೀಯರಿಗೆ ಟಿಕೇಟ್ ನೀಡುವಂತೆ ಒತ್ತಾಯ ಮಾಡ್ತಿದ್ದೇವೆ. ಸ್ಥಳೀಯರಿಗೆ ಟಿಕಟ್ ಸಿಗುವ ವಿಶ್ವಾಸ ಇದೆ ಎಂದರು.