ದೆಹಲಿ : ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ತಮ್ಮ ಸ್ಥಾನ ತೊರೆದು ಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲಿದ್ದಾರೆ ಎಂದು ವರದಿಯಾಗಿದೆ. ಈ ವರ್ಷದ ಅಂತ್ಯಕ್ಕೆ ಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯುವ ನಿರೀಕ್ಷೆ ಇದೆ. ಸದ್ಯ ಐಸಿಸಿ ಅಧ್ಯಕ್ಷರಾಗಿರುವ ಗ್ರೆಗ್ ಅವರಿಗೆ ತಮ್ಮ ಅವಧಿಯನ್ನು ವಿಸ್ತರಿಸಿಕೊಳ್ಳಲು ಅವಕಾಶವಿದೆ. ಒಂದು ವೇಳೆ ಚುನಾವಣೆ ನಡೆದು ಅದರಲ್ಲಿ ಜಯ್ ಶಾ ಸ್ಪರ್ಧಿಸಿ ಗೆದ್ದರೆ ಅವರು ಐಸಿಸಿ ಅಧ್ಯಕ್ಷ ಸ್ಥಾನಕ್ಕೇರಿದ ಅತ್ಯಂತ ಕಿರಿಯರು ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ. ಈಗ ಶಾ ಅವರಿಗೆ 35 ವರ್ಷ.