Join The Telegram | Join The WhatsApp |
ಬೆಳಗಾವಿ :
ಕಲಿಕೆ ಕೇವಲ ಮಗುವಿನ ಶೈಕ್ಷಣಿಕ ಅಭಿವೃದ್ಧಿಗಾಗಿ ಕೇಂದ್ರೀಕೃತವಾಗದೆ ವಿದ್ಯಾರ್ಥಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಿರಬೇಕು ಎಂದು ಬೆಳಗಾವಿ ಬಿ.ವಿ.ಬೆಲ್ಲದ ಕಾನೂನು ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ಬಿ.ಜಯಸಿಂಹ ಹೇಳಿದರು.
ಶುಕ್ರವಾರ ನಗರದ ಬಿ.ವಿ.ಬೆಲ್ಲದ ಕಾನೂನು ಮಹಾವಿದ್ಯಾಲಯದಲ್ಲಿ ಏರ್ಪಡಿಸಲಾಗಿದ್ದ ಪಾಲಕರ ಸಭೆಯಲ್ಲಿ ಅವರು ಮಾತನಾಡಿದರು.
ಕಾಲೇಜಿನಲ್ಲಿ ದೊರೆಯುವ ಸೌಲಭ್ಯಗಳ ಸದುಪಯೋಗ ಪಡೆದುಕೊಂಡು ಭವಿಷ್ಯದಲ್ಲಿ ಉತ್ತಮ ಹೆಸರು ಗಳಿಸಬೇಕು ಎಂದು ಅವರು ಕರೆ ನೀಡಿದರು.
ಸಹಾಯಕ ಪ್ರಾಧ್ಯಾಪಕಿ ಡಾ.ಉಮಾದೇವಿ ಹಿರೇಮಠ ಅವರು ಮಹಾವಿದ್ಯಾಲಯದಲ್ಲಿ ಕೈಗೊಳ್ಳುವ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳ ಸಂಕ್ಷಿಪ್ತ ವಿವರಣೆ ನೀಡಿದರು. ವಿದ್ಯಾರ್ಥಿಗಳ ಪಾಲಕರು ಸಹ ಈ ಸಂದರ್ಭದಲ್ಲಿ ತಮ್ಮ ಅಮೂಲ್ಯ ಸಲಹೆ-ಸೂಚನೆ ನೀಡಿದರು. ಸಹಾಯಕ ಪ್ರಾಧ್ಯಾಪಕಿ ಡಾ.ಸುಪ್ರಿಯಾ ಸ್ವಾಮಿ ಸ್ವಾಗತಿಸಿದರು. ಸಹಾಯಕ ಪ್ರಾಧ್ಯಾಪಕಿ ರಾಜಶ್ರೀ ಪಾಟೀಲ ವಂದಿಸಿದರು. ಮೂರನೇ ವರ್ಷದ ಕಾನೂನು ವಿದ್ಯಾರ್ಥಿ ರಮೇಶ ಮಗದುಮ ನಿರೂಪಿಸಿದರು. 50 ಹೆಚ್ಚು ವಿದ್ಯಾರ್ಥಿಗಳ ಪಾಲಕರು ಸಭೆಯಲ್ಲಿ ಭಾಗವಹಿಸಿದ್ದರು.ವಿದ್ಯಾರ್ಥಿಗಳು, ಪ್ರಾಧ್ಯಾಪಕರು, ಸಿಬ್ಬಂದಿಗಳು ಉಪಸ್ಥಿತರಿದ್ದರು
Join The Telegram | Join The WhatsApp |