Join The Telegram | Join The WhatsApp |
ಬೆಂಗಳೂರು-
ಜೆಡಿಎಸ್ ಹಿರಿಯ ನಾಯಕ, ಕಡೂರು ಕ್ಷೇತ್ರದ ಮಾಜಿ ಶಾಸಕ ವೈಎಸ್‌ವಿ ದತ್ತ ಅವರು ಜೆಡಿಎಸ್‌ಗೆ (JDS) ಗುಡ್ ಬೈ ಹೇಳುವ ಸಮಯ ಹತ್ತಿರ ಬಂದಿದೆ. ಡಿಸೆಂಬರ್ 17 ರಂದು ವೈಎಸ್‌ವಿ ದತ್ತ ಅವರು ಕಾಂಗ್ರೆಸ್‌ಗೆ ಸೇರುವ ಸಾಧ್ಯತೆ ಇದೆ ಎನ್ನಲಾಗಿದೆ.
ದತ್ತ ಅವರ ರಾಜೀನಾಮೆಯಿಂದ ಜೆಡಿಎಸ್‌ಗೆ ಭಾರೀ ಹಿನ್ನಡೆಯಾಗಲಿದ್ದು, ವೈಎಸ್‌ವಿ ದತ್ತ ಕಾಂಗ್ರೆಸ್ ಸೇರಿದರೆ ಕಡೂರು ಕ್ಷೇತ್ರದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ನೇರ ಹಣಾಹಣಿ ನಡೆಯಲಿದೆ.
‘ನಾನು ಕಾಂಗ್ರೆಸ್ ಸೇರಬೇಕು ಎಂಬುದು ಜೆಡಿಎಸ್ ಪಕ್ಷದ ಬಹುತೇಕ ಕಾರ್ಯಕರ್ತರು, ಪಕ್ಷಾತೀತವಾಗಿರುವ ನನ್ನ ಅಭಿಮಾನಿಗಳ ಅಭಿಪ್ರಾಯ. ಕ್ಷೇತ್ರದ ಜನರ ಅಭಿಪ್ರಾಯಕ್ಕೆ ವಿರುದ್ಧವಾಗಿ ಒಂಟಿಯಾಗಿ ತೀರ್ಮಾನ ತೆಗೆದುಕೊಳ್ಳುವುದಷ್ಟು ಜಾತಿ ಬಲ ಮತ್ತು ಜನ ಶಕ್ತಿ ನನಗೆ ಇಲ್ಲ. ನನಗಿರುವ ಜನ ಸಂಪರ್ಕ, ಪ್ರೀತಿ ಆಧರಿಸಿ ಈ ನಿರ್ಧಾರಕ್ಕೆ ಮುಂದಾಗಿದ್ದೇನೆ’ ಎಂದು ವಿವರಿಸಿದರು.
Join The Telegram | Join The WhatsApp |