ದೆಹಲಿ: ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ಕರ್ನಾಟಕ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಈ ಬಾರಿ ಅಚ್ಚರಿ ಆಯ್ಕೆ ಆಗುವುದು ಬಹುತೇಕ ನಿಶ್ಚಿತ. ಕೇಂದ್ರದ ಭಾರಿ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರಿಂದ ತೆರವಾಗುವ ಜೆಡಿಎಸ್ ರಾಷ್ಟ್ರಾಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗುವ ಸಾಧ್ಯತೆ ಹೆಚ್ಚಾಗಿದೆ. ಅದೇ ರೀತಿ ಕರ್ನಾಟಕ ಜೆಡಿಎಸ್ ಯುವ ಘಟಕದ ರಾಜ್ಯ ಅಧ್ಯಕ್ಷರಾಗಿರುವ ಕುಮಾರಸ್ವಾಮಿ ಅವರ ಸುಪುತ್ರ ನಿಖಿಲ್ ಅವರು ರಾಜ್ಯಾಧ್ಯಕ್ಷರಾಗಿ ಬಡ್ತಿ ಪಡೆಯುವ ಎಲ್ಲಾ ಸಾಧ್ಯತೆಗಳು ದಟ್ಟವಾಗಿವೆ.