Join The Telegram | Join The WhatsApp |
ಬೆಂಗಳೂರು-
ಜೆಡಿಎಸ್ ಪಕ್ಷದಿಂದ ಮುಳಬಾಗಿಲಿನಿಂದ ಹಮ್ಮಿಕೊಂಡಿರುವ ಪಂಚರತ್ನ ರಥಯಾತ್ರೆಗೆ ಇಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ.ದೇವೇಗೌಡ ಚಾಲನೆ ನೀಡಲಿದ್ದಾರೆ.
ಈ ಹಿಂದೆ ರಾಜ್ಯದ ಗಡಿ ಜಿಲ್ಲೆ ಕೋಲಾರದ ಮುಳಬಾಗಿಲು ವಿಧಾನಸಭಾ ಕ್ಷೇತ್ರದ ಕುರುಡುಮೇಲೆ ಶ್ರೀ ಗಣಪತಿ ದೇವಾಲಯದಿಂದ ನ. 1ರಂದೇ ರಥಯಾತ್ರೆ ಆರಂಭವಾಗಿತ್ತು. ಆದರೆ, ಮಳೆಯ ಕಾರಣಕ್ಕೆ ಮುಂದೂಡಲಾಗಿತ್ತು.
ಇಂದು ಮಧ್ಯಾಹ್ನ 2 ಗಂಟೆಗೆ ಮುಳಬಾಗಿಲು ಪಟ್ಟಣದ ತಿರುಪತಿ ಬೈಪಾಸ್ ರಸ್ತೆಯಲ್ಲಿರುವ ಬಾಲಾಜಿ ಭವನದ ಪಕ್ಕದ ಜಾಗದಲ್ಲಿ ಬೃಹತ್ ಸಮಾವೇಶ ನಡೆಯಲಿದೆ. ಅಸಂಖ್ಯಾತ ಜನರು ಭಾಗವಹಿಸಲಿದ್ದಾರೆ. ಈ ಸಮಾವೇಶದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ, ಪಕ್ಷದ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸೇರಿದಂತೆ ಪಕ್ಷದ ಎಲ್ಲ ಶಾಸಕರು, ಮಾಜಿ ಸಚಿವರು, ಎಲ್ಲ ಕ್ಷೇತ್ರಗಳ ಸಂಭವನೀಯ ಅಭ್ಯರ್ಥಿಗಳು ಭಾಗವಹಿಸಲಿದ್ದಾರೆ.
Join The Telegram | Join The WhatsApp |