Join The Telegram | Join The WhatsApp |
ನವದೆಹಲಿ-
ಭಾರತೀಯ ಜೀವ ವಿಮಾ ನಿಗಮವು ತನ್ನ ಅಧಿಕೃತ ವೆಬ್‌ಸೈಟ್ www.licindia.in ನಲ್ಲಿ AAO ಜನರಲಿಸ್ಟ್ ಹುದ್ದೆಗೆ ಅಭ್ಯರ್ಥಿಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ದೇಶಾದ್ಯಂತ ಎಲ್‌ಐಸಿಯ ವಿವಿಧ ಕಚೇರಿಗಳಲ್ಲಿ ಸಹಾಯಕ ಆಡಳಿತಾಧಿಕಾರಿ ಹುದ್ದೆಗೆ ಒಟ್ಟು 300 ಅಭ್ಯರ್ಥಿಗಳನ್ನು ನೇಮಕ ಮಾಡಲಾಗುತ್ತದೆ. ಆಕಾಂಕ್ಷಿಗಳು ತಮ್ಮ ಅರ್ಜಿಯನ್ನು 15ನೇ ಜನವರಿ 2023 ರಿಂದ ಆನ್‌ಲೈನ್ ಮೂಲಕ ಮಾತ್ರ ಸಲ್ಲಿಸಬಹುದು.
LIC AAO Recruitment 2023: ಹುದ್ದೆಗಳ ವಿವರ
ಒಟ್ಟು 300 ಎಎಒ ಹುದ್ದೆಗಳಿವೆ. ಈ ವರ್ಷದ 277 ಹುದ್ದೆಗಳಲ್ಲಿ ಎಸ್‌ಸಿ ಅಭ್ಯರ್ಥಿಗಳಿಗೆ 46, ಎಸ್‌ಟಿ ಅಭ್ಯರ್ಥಿಗಳಿಗೆ 22, ಒಬಿಸಿಗೆ 70, ಇಡ್ಬ್ಲ್ಯುಎಸ್‌ಗೆ 27 ಮತ್ತು ಸಾಮಾನ್ಯ ಅಭ್ಯರ್ಥಿಗಳಿಗೆ 112 ಹುದ್ದೆಗಳನ್ನು ಮೀಸಲಿರಿಸಲಾಗಿದೆ. ಬ್ಯಾಕ್‌ಲಾಗ್ 23 ಹುದ್ದೆಗಳಲ್ಲಿ ಎಸ್‌ಸಿ ಅಭ್ಯರ್ಥಿಗಳಿಗೆ 4, ಎಸ್‌ಟಿ ಅಭ್ಯರ್ಥಿಗಳಿಗೆ 5, ಒಬಿಸಿಗೆ 14 ಹುದ್ದೆಗಳನ್ನು ಮೀಸಲಿರಿಸಲಾಗಿದೆ.
ಪ್ರಮುಖ ದಿನಾಂಕಗಳು
ಆನ್‌ಲೈನ್ ಅರ್ಜಿ ಸಲ್ಲಿಕೆ ಮತ್ತು ಅರ್ಜಿ ಶುಲ್ಕ ಪಾವತಿ ಆರಂಭಿಕ ದಿನಾಂಕ: 15.01.2023
ಅರ್ಜಿ ಸಲ್ಲಿಸಲು ಮತ್ತು ಶುಲ್ಕ ಪಾವತಿಗೆ ಕೊನೆಯ ದಿನ: 31.01.2023
Join The Telegram | Join The WhatsApp |