Join The Telegram | Join The WhatsApp |
ಬೆಂಗಳೂರು-
ಜೆಡಿಎಸ್ ಹಿರಿಯ ನಾಯಕ ಹಾಗೂ ಮಾಜಿ ಶಾಸಕ ವೈ.ಎಸ್.ವಿ. ದತ್ತ ಅವರು ಕಾಂಗ್ರೆಸ್ ಪಕ್ಷ ಸೇರುವುದಾಗಿ ಪ್ರಕಟಿಸಿದ್ದಾರೆ. ಜನವರಿ 15ರಂದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುತ್ತಿರುವುದಾಗಿ ಅವರು ಪ್ರಕಟಿಸಿದ್ದಾರೆ. ಕಾಂಗ್ರೆಸ್ ಪಕ್ಷ ಸೇರ್ಪಡೆ ಕುರಿತ ಗೊಂದಲಗಳಿಗೆ ಅವರು ತೆರೆ ಎಳೆದಿದ್ದು ಕ್ಷೇತ್ರದ ಮತದಾರರು ಮತ್ತು ಕಾರ್ಯಕರ್ತರ ಒಟ್ಟಾರೆ ಅಭಿಪ್ರಾಯದ ಮೇರೆಗೆ ಕಾಂಗ್ರೆಸ್ ಸೇರಲು ಐತಿಹಾಸಿಕ ನಿರ್ಣಯ ತೆಗೆದುಕೊಂಡಿದ್ದೇನೆ ಎಂದು ಗುರುವಾರ ಸಂಜೆ ಕಡೂರು ತಾಲೂಕಿನ ತಮ್ಮ ಹುಟ್ಟೂರು ಯಗಟಿ ಗ್ರಾಮದ ನಿವಾಸದಲ್ಲಿ ಪತ್ರಕರ್ತರಿಗೆ ತಿಳಿಸಿದರು.
Join The Telegram | Join The WhatsApp |