ಬೆಳಗಾವಿ:
ಬೆಳಗಾವಿಯ ಬಸವರಾಜ ಕಟ್ಟೀಮನಿ ಪ್ರತಿಷ್ಠಾನ ಕೊಡಮಾಡುವ ಪ್ರಸಕ್ತ ಸಾಲಿನ ‘ಬಸವರಾಜ ಕಟ್ಟೀಮನಿ ಪತ್ರಿಕೋದ್ಯಮ ಪ್ರಶಸ್ತಿ’ಗೆ ಹೆಸರಾಂತ ಪತ್ರಕರ್ತ ಹಾಗೂ ಪತ್ರಿಕೋದ್ಯೋಗಿ ಚಂದ್ರಕಾಂತ ವಡ್ಡು ಅವರನ್ನು ಆಯ್ಕೆ ಮಾಡಲಾಗಿದೆ.

‘ಬಸವರಾಜ ಕಟ್ಟೀಮನಿ ಪತ್ರಿಕೋದ್ಯಮ ಪ್ರಶಸ್ತಿಯು ಐವತ್ತು ಸಾವಿರ ರೂಪಾಯಿ, ಪ್ರಶಸ್ತಿಪತ್ರ ಹಾಗೂ ಫಲಪುಷ್ಪಗಳನ್ನು ಒಳಗೊಂಡಿರುತ್ತದೆ.

ಬಸವರಾಜ ಕಟ್ಟೀಮನಿ ಪ್ರತಿಷ್ಠಾನದ ಅಧ್ಯಕ್ಷ ಪ್ರೊ. ಮಲ್ಲಿಕಾರ್ಜುನ ಹಿರೇಮಠ ಅವರ ಅಧ್ಯಕ್ಷತೆಯಲ್ಲಿ, ಬೆಳಗಾವಿಯಲ್ಲಿ ನಡೆದ ಸರ್ವಸದಸ್ಯರ ಸಭೆಯಲ್ಲಿ ಚಂದ್ರಕಾಂತ ವಡ್ಡು ಅವರ ಹೆಸರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದ್ದು, ಈ ಪ್ರಶಸ್ತಿಯನ್ನು ಫೆಬ್ರವರಿಯಲ್ಲಿ ಶಿವಮೊಗ್ಗದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪ್ರದಾನ ಮಾಡಲಾಗುವುದು. ಎಂದು ಬೆಳಗಾವಿಯ ಬಸವರಾಜ ಕಟ್ಟೀಮನಿ ಪ್ರತಿಷ್ಠಾನ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.