ಬೆಳಗಾವಿ: ಶ್ರೀ ರಾಘವೇಂದ್ರ ಸ್ವಾಮಿ ಆರಾಧನಾ ಮಹೋತ್ಸವ ಕಮಿಟಿ, ಶ್ರೀ ಮಲ್ಲಿಕಾರ್ಜುನ ದೇವಸ್ಥಾನ, ಪಾಶ್ಚಾಪುರ ಇವರ ಆರಾಧನಾ ಮಹೋತ್ಸವದ ಅಂಗವಾಗಿ ನೀಡಲಾಗುವ ಪರಿಮಳ ಪುರಸ್ಕಾರಕ್ಕೆ ಹಿರಿಯ ಪತ್ರಕರ್ತ ಸಾಹಿತಿ ಎಲ್. ಎಸ್. ಶಾಸ್ತ್ರಿ ಹಾಗೂ ವಾಗ್ಮಿ ಪಿ.ಜಿ.ಕೆಂಪಣ್ಣವರ ಭಾಜನರಾಗಿದ್ದಾರೆ. ಪ್ರತಿ ವರ್ಷ ಈ ಪ್ರಶಸ್ತಿಯನ್ನು ಹಿರಿಯ ಸಾಧಕರಿಗೆ ನೀಡಲಾಗುತ್ತದೆ.

ಆಗಸ್ಟ್ 22 ರಂದು 48 ನೇ ಆರಾಧನಾ ಮಹೋತ್ಸವದ ಸಂದರ್ಭದಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಸಮಾರಂಭದ ಅಧ್ಯಕ್ಷತೆಯನ್ನು ಡಾ. ಬಸವರಾಜ ಜಗಜಂಪಿ ವಹಿಸುವರು. ಕಾರಂಜಿಮಠದ ಶ್ರೀ ಗುರುಸಿದ್ಧ ಸ್ವಾಮೀಜಿ ಸಾನ್ನಿಧ್ಯ ವಹಿಸುವರು.