ಬೆಳಗಾವಿ : ಬೆಳಗಾವಿ ವಿಮಾನ ನಿಲ್ದಾಣದಲ್ಲಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ರಾಜ್ಯ ಅಧ್ಯಕ್ಷ ಬಿ ವೈ ವಿಜಯೇಂದ್ರ ಅವರು ಮಂಗಳವಾರ ಆತ್ಮೀಯವಾಗಿ ಸ್ವಾಗತಿಸಿದರು.
ಬಿಜೆಪಿಯ ಜಿಲ್ಲಾ ಮತ್ತು ರಾಜ್ಯಮಟ್ಟದ ನಾಯಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ನಡ್ಡಾ ಅವರು ಚಿಕ್ಕೋಡಿಯಲ್ಲಿ ನಡೆಯುವ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಈಗ ಭಾಗವಹಿಸಲಿದ್ದಾರೆ. ಮಧ್ಯಾಹ್ನದ ನಂತರ ಬೆಳಗಾವಿಯಲ್ಲಿ ಪ್ರಭುದ್ಧರ ಸಭೆ ಮತ್ತು ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.