ಬೆಳಗಾವಿ: ಭಾರತೀಯ ಜನತಾ ಪಾರ್ಟಿಯ ವ್ಯಾಪಾರ-ವಾಣಿಜ್ಯ ಪ್ರಕೋಷ್ಠದ ರಾಜ್ಯ ಸಮಿತಿಯ ಸದಸ್ಯರನ್ನಾಗಿ ಬೆಳಗಾವಿಯ ಜ್ಯೋತಿ ದೀಪಕ್ ಶೆಟ್ಟಿ ಅವರನ್ನು ಭಾರತೀಯ ಜನತಾ ಪಕ್ಷದ ವ್ಯಾಪಾರ ವಾಣಿಜ್ಯ ಪ್ರಕೋಷ್ಠದ ರಾಜ್ಯ ಸಂಚಾಲಕ ವಿಜಯಕುಮಾರ ನಿಯುಕ್ತಿಗೊಳಿಸಿ ಆದೇಶ ಹೊರಡಿಸಿದ್ದಾರೆ. ರಾಜ್ಯದ ವಿವಿಧ 20 ಪ್ರಕೋಷ್ಠಗಳ ಸಂಚಾಲಕ ಎಸ್.ದತ್ತಾತ್ರಿ ಅವರು ಬೆಂಗಳೂರಿನಲ್ಲಿ ಜ್ಯೋತಿ ಶೆಟ್ಟಿ ಅವರಿಗೆ ಪ್ರಮಾಣ ಪತ್ರ ನೀಡಿದರು. ಈ ಸಂದರ್ಭದಲ್ಲಿ ರಾಜ್ಯ ಪ್ರಕೋಷ್ಠದ ಸಂಚಾಲಕ ವಿಜಯಕುಮಾರ ಕುಡಿಗನೂರು, ಸಹ ಸಂಚಾಲಕ ಭವಾನಿ ಮೋರೆ ಸೇರಿದಂತೆ ವಿವಿಧ ಪ್ರಕೋಷ್ಠಗಳಿಗೆ ನೂತನವಾಗಿ ಆಯ್ಕೆಯಾದ ಸಂಚಾಲಕರು ಉಪಸ್ಥಿತರಿದ್ದರು.