ಬೆಂಗಳೂರು : ವಿಧಾನ ಪರಿಷತ್ತಿಗೆ ಬೆಂಗಳೂರಿನ ಶಿಕ್ಷಕರ ಕ್ಷೇತ್ರದಲ್ಲಿ ನಡೆದ ಉಪ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದೆ.

ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ ಅವರಿಗೆ ಜಯವಾಗಿದೆ. ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿ ಎ.ಪಿ.ರಂಗನಾಥ ಅವರಿಗೆ ಸೋಲಾಗಿದ್ದು, ಪುಟ್ಟಣ್ಣ 1506 ಮತಗಳ ಅಂತರದ ಭರ್ಜರಿ ಗೆಲುವು ಸಾಧಿಸಿದ್ದಾರೆ.

ಈಗ ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಉಪ ಚುನಾವಣೆಯಾಗಿದೆ. ಈ ಹಿಂದೆ ಸಹ ಪುಟ್ಟಣ್ಣ ಅವರು ಬಿಜೆಪಿಯಿಂದ ಜಯಗಳಿಸಿದ್ದರು. ಆದರೆ, ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸೇರ್ಪಡೆಗೊಂಡು ರಾಜಾಜಿನಗರದಲ್ಲಿ ಸ್ಪರ್ಧೆ ಮಾಡಿದ್ದರು. ಅವರು ಅಲ್ಲಿ ಸೋಲು ಕಂಡಿದ್ದರು. ಹೀಗಾಗಿ ಮತ್ತೆ ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಸ್ಪರ್ಧೆ ಮಾಡಿ ಈಗ ಜಯ ಕಂಡಿದ್ದಾರೆ. ಇವರ ವಿಧಾನ ಪರಿಷತ್‍ನ ಸದಸ್ಯತ್ವದ ಅವಧಿ 2026ರ ನವೆಂಬರ್ 11ರವರೆಗೆ ಇರಲಿದೆ.

ಕಳೆದ ಬಾರಿ ನಡೆದಿದ್ದ ಚುನಾವಣೆಯಲ್ಲಿಯೂ ರಂಗನಾಥ್ ಮತ್ತು ಪುಟ್ಟಣ್ಣ ಅವರ ನಡುವೆ ತೀವ್ರ ಸ್ಪರ್ಧೆ ಏರ್ಪಟ್ಟು ಪುಟ್ಟಣ್ಣ ಜಯಗಳಿಸಿದ್ದರು. ಈಗ ಪುಟ್ಟಣ್ಣ ಕಾಂಗ್ರೆಸ್‌ನಿಂದ ಸ್ಪರ್ಧೆ ಮಾಡಿ ಮತ್ತೆ ಗೆಲುವು ಸಾಧಿಸಿದ್ದಾರೆ.