ಬೆಂಗಳೂರು :
ಮುಸ್ಲಿಂ ಮಹಿಳೆಯರ ಬಗ್ಗೆ ಶ್ರೀರಂಗಪಟ್ಟಣ ಹನುಮ ಜಯಂತಿಯಲ್ಲಿ ನಿಂದನಾತ್ಮಕ ಭಾಷಣ ಮಾಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ವಿವಿಧ ಕಡೆಗಳಲ್ಲಿ ಪ್ರಕರಣ ದಾಖಲಾಗಿದ್ದ ಕಲ್ಲಡ್ಕ ಪ್ರಭಾಕರ ಭಟ್ ಅವರಿಗೆ ಕೊನೆಗೂ ಕರ್ನಾಟಕ ಹೈಕೋರ್ಟ್ ನಿಂದ ಮಧ್ಯಂತರ ಜಾಮೀನು ಮಂಜೂರಾಗಿದೆ.
ಹಿರಿಯ ನ್ಯಾಯವಾದಿ ಹಾಗೂ ಕರ್ನಾಟಕದ ಮಾಜಿ ಎಎಜಿ ಅರುಣ್ ಶಾಮ್ ಸಾಮಾಜಿಕ ಮಾಧ್ಯಮಗಳ ಮೂಲಕ ಈ ಮಾಹಿತಿ ನೀಡಿದ್ದಾರೆ.