ಬೆಂಗಳೂರು :

ಇಡೀ ದೇಶಕ್ಕೆ ಕರ್ನಾಟಕ ಸರ್ಕಾರದ ‘ಗ್ಯಾರಂಟಿ’ ಯೋಜನೆಗಳು ಎಂದು ರಾಜ್ಯಪಾಲ ಥಾವರ್‌ಚಂದ್ ಗೆಹೋಟ್ ಕರ್ನಾಟಕ ವಿಧಾನ ಮಂಡಲದ ಬಜೆಟ್ ಅಧಿವೇಶನದ ಆರಂಭದ ದಿನ ಜಂಟಿ ಅಧಿವೇಶನ ಉದ್ದೇಶಿಸಿ ಸೋಮವಾರ ಮಾತನಾಡಿದ ಅವರು, ಸರ್ಕಾರವು ನಡೆ ನುಡಿಗಳಗಳನ್ನು ಒಂದಾಗಿಸಿಕೊಂಡು ಕೆಲಸ ಮಾಡುತ್ತಿದೆ.

ಕರ್ನಾಟಕ ಮಾದರಿಯನ್ನು ಸರ್ಕಾರ ಅಧಿಕಾರಕ್ಕೆ ಬಂದ ಕ್ಷಣದಿಂದಲೇ ಅನುಸರಿಸುತ್ತಾ ಬಂದಿದೆ. ಹೆಚ್ಚುತ್ತಿರುವ ಆರ್ಥಿಕ ಅಸಮಾನತೆಯಿಂದಾಗಿ ಬಡವರಿಗೆ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಸಾಂತ್ವನವನ್ನು ಒದಗಿಸಿವೆ ಎಂದು ಹೇಳಿದರು.

ಆರ್ಥಿಕ ಅಸಮಾನತೆಯಿಂದ ಅಶಕ್ತರಾಗಿರುವ ಜನತೆಯ ಬದುಕಿಗೆ ಕೇವಲ ಈ ಗ್ಯಾರಂಟಿಗಳು ಮಾತ್ರ ಸಾಕಾಗುವುದಿಲ್ಲ ಎನ್ನುವ ಅರಿವು ಸರ್ಕಾರಕ್ಕೆ ಇದೆ. ಸರ್ಕಾರವು ಜಾರಿಗೆ ತಂದ ಗ್ಯಾರಂಟಿ ಯೋಜನೆಗಳಿಂದ ಎರಡು ಕೋಟಿಗೂ ಅಧಿಕ ಕುಟುಂಬಗಳು ಬಡತನ ರೇಖೆಗಿಂತ ಹೊರಗೆ ಬಂದು ಮಧ್ಯಮ ವರ್ಗದ ಸ್ಥಿತಿಗೆ ಏರುತ್ತಿವೆ. ಸರ್ಕಾರದ ಒಂದು ನಿರ್ಣಯದಿಂದ ರಾಜ್ಯದ 5 ಕೋಟಿಗೂ ಹೆಚ್ಚು ಜನರು ಮಧ್ಯಮ ವರ್ಗದ ಸ್ಥಿತಿಗೆ ಕಾರಣವಾಗಿದೆ ಎಂದು ಹೇಳಿದರು.

ರಾಜ್ಯ ವಿಧಾನಮಂಡಲದ ಉಭಯ ಸದನಗಳ ಜಂಟಿ ಅಧಿವೇಶನ ಇಂದು ಆರಂಭವಾಗಿದೆ. ಬಿಜೆಪಿ ಸದಸ್ಯರು ಕೇಸರಿ ಶಾಲು ಧರಿಸಿ ಆಗಮಿಸುವ ಮೂಲಕ ವಿಶೇಷತೆ ಮೆರೆದರು.