ನವದೆಹಲಿ: ನಟಿ ರೂಪಾಲಿ ಗಂಗೂಲಿ ಅವರು ಇಂದು (ಬುಧವಾರ) ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ದೆಹಲಿಯಲ್ಲಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿನೋದ್‌ ತಾವ್ಡೆ ಅವರು ರೂಪಾಲಿ ಗಂಗೂಲಿ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡಿದ್ದಾರೆ.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಎಲ್ಲರನ್ನೂ ಬಿಜೆಪಿಯತ್ತ ಆಕರ್ಷಿಸುವ ಏಕೈಕ ವ್ಯಕ್ತಿತ್ವ ಪ್ರಧಾನಿ ಮೋದಿ. ಅವರ ಕಾರ್ಯ ವೈಖರಿ ಮತ್ತು ನಮ್ಮ ದೇಶವನ್ನು ಅಭಿವೃದ್ಧಿಯತ್ತ ಕೊಂಡೊಯ್ಯುವ ರೀತಿ ಪ್ರತಿಯೊಬ್ಬರಿಗೂ ಸ್ಫೂರ್ತಿಯಾಗಿದೆ. ಅಭಿವೃದ್ಧಿಯ ಈ ‘ಮಹಾಯಜ್ಞ’ವನ್ನು ನೋಡಿದಾಗ ನಾನು ಸಹ ಇದರಲ್ಲಿ ಪಾಲ್ಗೊಳ್ಳಬೇಕು ಎಂದು ನನಗೆ ಅನಿಸಿತು. ಹಾಗಾಗಿ ಬಿಜೆಪಿಗೆ ಸೇರಿದ್ದೇನೆ’ ಎಂದು ಹೇಳಿದ್ದಾರೆ.

ನಾನು ಸಹ ‘ಮೋದಿ ಸೇನೆ’ಗೆ ಸೇರ್ಪಡೆಯಾಗುವ ಮೂಲಕ ದೇಶಕ್ಕೆ ನನ್ನದೇ ಆದ ಕೊಡುಗೆ ನೀಡಲು ಬಯಸುತ್ತೇನೆ ಎಂದಿದ್ದಾರೆ.