ಬೆಳಗಾವಿ :
ಬೆಳಗಾವಿಯ ಜಿಲ್ಲಾಡಳಿತ ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಇವರ ಸಂಯುಕ್ತ ಆಶ್ರಯದಲ್ಲಿ ಕನಕದಾಸ ಜಯಂತ್ಯೋತ್ಸವವನ್ನು ನವೆಂಬರ್ 30, 2023 ರಂದು ಆಚರಿಸಲಾಗುತ್ತಿದೆ.
ಬೆಳಿಗ್ಗೆ 11 ಗಂಟೆಗೆ ಕನಕದಾಸ ವೃತ್ತದಿಂದ ಕುಮಾರ ಗಂಧರ್ವ ಕಲಾಮಂದಿರದವರೆಗೆ ಭಾವಚಿತ್ರದ ಮೆರವಣಿಗೆ ನಡೆಯಲಿದೆ. ಮಧ್ಯಾಹ್ನ 12.30 ಕ್ಕೆ ವೇದಿಕೆ ಕಾರ್ಯಕ್ರಮ ಜರುಗಲಿದೆ.
ಜಿಲ್ಲಾ ಉಸ್ತುವಾರಿ ಹಾಗೂ ಲೋಕೋಪಯೋಗಿ ಸಚಿವ ಸತೀಶ ಲ. ಜಾರಕಿಹೊಳಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವೆ ಲಕ್ಷ್ಮಿ ಆರ್. ಹೆಬ್ಬಾಳ್ಕರ್ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.
ಶಾಸಕ ಆಸೀಫ್ ಸೇಠ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಸರ್ಕಾರಿ ಮುಖ್ಯ ಸಚೇತಕ ಅಶೋಕ ಮ. ಪಟ್ಟಣ, ಕರ್ನಾಟಕ ಸರ್ಕಾರದ ಮಾನ್ಯ ವಿಶೇಷ ಪ್ರತಿನಿಧಿ-2 ನವದೆಹಲಿ ಪ್ರಕಾಶ್ ಬಾ. ಹುಕ್ಕೇರಿ ವಿಶೇಷ ಆಮಂತ್ರಿತರಾಗಿದ್ದಾರೆ.
ಆರ್.ಪಿ.ಡಿ ಮಹಾವಿದ್ಯಾಲಯದ ಕನ್ನಡ ಪ್ರಾಧ್ಯಾಪಕ ಡಾ. ಎಚ್. ಬಿ. ಕೋಲಕಾರ ಅವರು ಉಪನ್ಯಾಸ ನೀಡಲಿದ್ದಾರೆ ಹಾಗೂ ಸೀಮಾ ಕುಲಕರ್ಣಿ ಹಾಗೂ ತಂಡದವರಿಂದ ಸಂಗೀತ ಕಾರ್ಯಕ್ರಮ ನಡೆಯಲಿದೆ.
ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತ ಸಂಜಯ್ ಬಿ. ಶಟ್ಟೆಣ್ಣವರ್, ಪೊಲೀಸ್ ಮಹಾನಿರೀಕ್ಷಕ ವಿಕಾಶ್ ಕುಮಾರ್ , ಜಿಲ್ಲಾಧಿಕಾರಿ ನಿತೀಶ್ ಕೆ. ಪಾಟೀಲ, ಪೊಲೀಸ್ ಆಯುಕ್ತ ಎಸ್.ಎನ್. ಸಿದ್ದರಾಮಪ್ಪ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೀಮಾಶಂಕರ್ ಎಸ್. ಗುಳೇದ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹರ್ಷಲ್ ಭೋಯರ್, ಮಹಾನಗರ ಪಾಲಿಕೆ ಆಯುಕ್ತ ಅಶೋಕ ದುಡಗುಂಟಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಉಪನಿರ್ದೇಶಕಿ ವಿದ್ಯಾವತಿ ಭಜಂತ್ರಿ, ಸಮಾಜದ ಮುಖಂಡರು ಹಾಗೂ ಮತ್ತಿತರ ಗಣ್ಯರು ಜಯಂತ್ಯೋತ್ಸವದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.