ಬೆಂಗಳೂರು: ಇನ್ನು ಮುಂದೆ ಪೊಟ್ಟಣಗಳ ಮೇಲೆ ಕನ್ನಡ ಕಡ್ಡಾಯವಾಗಿ ಇರಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಬೆಂಗಳೂರಿನಲ್ಲಿ ಅವರು ಮಾತನಾಡಿ, ರಾಜ್ಯದಲ್ಲಿ ಉದ್ಯಮಗಳು ತಯಾರಿಸುವ ಉತ್ಪನ್ನಗಳ ಮೇಲೆ ಇಂಗ್ಲಿಷ್ ಭಾಷೆ ಹಾಕಲಾಗುತ್ತಿದೆ. ಆದರೆ, ಇನ್ನು ಮುಂದೆ ಕನ್ನಡದಲ್ಲೂ ಹೆಸರು ಮುದ್ರಿಸುವುದನ್ನು ಕಡ್ಡಾಯ ಮಾಡಲಾಗುವುದು ಎಂದು ಅವರು ಹೇಳಿದರು.