ದೆಹಲಿ: ಕನ್ನಡಿಗ, ಮಾಜಿ ಸಚಿವ, ಮಾಜಿ ಸಂಸದರು ಆಗಿರುವ ಮೈಸೂರಿನ ಸಿ. ಎಚ್. ವಿಜಯಶಂಕರ್ ಅವರನ್ನು ಇದೀಗ ರಾಜ್ಯಪಾಲರನ್ನಾಗಿ ನೇಮಕ ಮಾಡಿ ಕೇಂದ್ರ ಸರಕಾರ ಆದೇಶ ಹೊರಡಿಸಿದೆ. ಈ ಮೂಲಕ ಬಿಜೆಪಿಯ ಹಿರಿಯ ನಾಯಕನಿಗೆ ಬಿಜೆಪಿ ಮಾನ್ಯತೆ ನೀಡಿದೆ.

ರಾಷ್ಟ್ರಪತಿ ದ್ರೌಪದಿ ಮುರ್ಮು (ಅವರು 6 ರಾಜ್ಯಗಳಿಗೆ ನೂತನ ರಾಜ್ಯಪಾಲರನ್ನು ನೇಮಕ ಮಾಡಿದ್ದಾರೆ. ಜತೆಗೆ ಮೂವರು ರಾಜ್ಯಪಾಲರನ್ನು ಬೇರೆಡೆಗೆ ನಿಯುಕ್ತಿಗೊಳಿಸಿ ಆದೇಶ ಹೊರಡಿಸಿದ್ದಾರೆ. ಈ ಪೈಕಿ ಮೇಘಾಲಯದ ರಾಜ್ಯಪಾಲರಾಗಿ ಮೈಸೂರಿನ ಮಾಜಿ ಸಂಸದ, ಮಾಜಿ ಸಚಿವ ಸಿ.ಎಚ್.ವಿಜಯ ಶಂಕರ್ ನೇಮಕವಾಗಿದ್ದಾರೆ. ಲಕ್ಷ್ಮಣ್ ಪ್ರಸಾದ್ ಆಚಾರ್ಯ ಅವರನ್ನು ಅಸ್ಸಾಂ ರಾಜ್ಯಪಾಲರನ್ನಾಗಿ ನೇಮಕ ಮಾಡಲಾಗಿದ್ದು, ಅವರಿಗೆ ಮಣಿಪುರದ ಹೆಚ್ಚುವರಿ ಉಸ್ತುವಾರಿ ನೀಡಲಾಗಿದೆ. ಬನ್ವಾರಿಲಾಲ್ ಪುರೋಹಿತ್ ಅವರ ಬದಲಿಗೆ ಗುಲಾಬ್ ಚಂದ್ ಕಟಾರಿಯಾ ಅವರನ್ನು ಪಂಜಾಬ್ ರಾಜ್ಯಪಾಲರನ್ನಾಗಿ ನೇಮಿಸಲಾಗಿದೆ ಎಂದು ರಾಷ್ಟ್ರಪತಿ ಭವನ ಪ್ರಕಟಿಸಿದೆ.

ಕೇಂದ್ರಾಡಳಿತ ಪ್ರದೇಶವಾದ ಚಂಡೀಗಢದ ಆಡಳಿತಾಧಿಕಾರಿಯಾಗಿ ಗುಲಾಬ್ ಚಂದ್ ಕಟಾರಿಯಾ ಅವರನ್ನೇ ನೇಮಕ ಮಾಡಲಾಗಿದೆ. ಪಂಜಾಬ್ ರಾಜ್ಯಪಾಲ ಮತ್ತು ಚಂಡೀಗಢದ ಆಡಳಿತಾಧಿಕಾರಿ ಹುದ್ದೆಗೆ ಬನ್ವಾರಿಲಾಲ್ ಪುರೋಹಿತ್ ಅವರು ಫೆಬ್ರವರಿಯಲ್ಲಿ ರಾಜೀನಾಮೆ ನೀಡಿದ್ದು, ರಾಷ್ಟ್ರಪದಿ ದ್ರೌಪದಿ ಮುರ್ಮು ಅಂಗೀಕರಿಸಿದ್ದಾರೆ. 83 ವರ್ಷದ ಬನ್ವಾರಿಲಾಲ್ ಪುರೋಹಿತ್ ತಮ್ಮ ರಾಜೀನಾಮೆ ಪತ್ರದಲ್ಲಿ, “ವೈಯಕ್ತಿಕ ಕಾರಣಗಳು ಮತ್ತು ಇತರ ಕೆಲವು ಬದ್ಧತೆಗಳಿಂದಾಗಿ ನಾನು ಕೇಂದ್ರಾಡಳಿತ ಪ್ರದೇಶ ಚಂಡೀಗಢದ ರಾಜ್ಯಪಾಲ ಮತ್ತು ಆಡಳಿತಾಧಿಕಾರಿ ಹುದ್ದೆಗೆ ರಾಜೀನಾಮೆ ನೀಡುತ್ತಿದ್ದೇನೆʼʼ ಎಂದು ತಿಳಿಸಿದ್ದರು.

ಸಿಕ್ಕಿಂ ರಾಜ್ಯಪಾಲ ಲಕ್ಷ್ಮಣ್ ಪ್ರಸಾದ್ ಆಚಾರ್ಯ ಅವರನ್ನು ಅಸ್ಸಾಂ ರಾಜ್ಯಪಾಲರನ್ನಾಗಿ ನೇಮಿಸಲಾಗಿದೆ ಮತ್ತು ಹೆಚ್ಚುವರಿಯಾಗಿ ಮಣಿಪುರದ ಜವಾಬ್ದಾರಿಯನ್ನು ಸಹ ನೀಡಲಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. ಅನುಸೂಯಾ ಉಕ್ಯೆ ಅವರು ಕಳೆದ ವರ್ಷ ಫೆಬ್ರವರಿಯಿಂದ ಮಣಿಪುರದ ರಾಜ್ಯಪಾಲರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಬಿಜೆಪಿ ಹಿರಿಯ ನಾಯಕ ಓಂ ಪ್ರಕಾಶ್ ಮಾಥುರ್ ಅವರನ್ನು ಸಿಕ್ಕಿಂನ ನೂತನ ರಾಜ್ಯಪಾಲರನ್ನಾಗಿ ನೇಮಿಸಲಾಗಿದೆ. ತೆಲಂಗಾಣದ ಹೆಚ್ಚುವರಿ ಜವಾಬ್ದಾರಿಯನ್ನು ಹೊಂದಿದ್ದ ಜಾರ್ಖಂಡ್ ರಾಜ್ಯಪಾಲ ಸಿ.ಪಿ.ರಾಧಾಕೃಷ್ಣನ್ ಅವರಿಗೆ ಮಹಾರಾಷ್ಟ್ರದ ಜವಾಬ್ದಾರಿ ನೀಡಲಾಗಿದೆ. ಕೇಂದ್ರದ ಮಾಜಿ ಕಾರ್ಮಿಕ ಮತ್ತು ಉದ್ಯೋಗ ಸಚಿವ ಸಂತೋಷ್ ಕುಮಾರ್ ಗಂಗ್ವಾರ್ ಅವರನ್ನು ಜಾರ್ಖಂಡ್ ರಾಜ್ಯಪಾಲರನ್ನಾಗಿ ನಿಯುಕ್ತಿಗೊಳಿಸಲಾಗಿದೆ.

ತ್ರಿಪುರಾದ ಮಾಜಿ ಉಪಮುಖ್ಯಮಂತ್ರಿ ಜಿಷ್ಣು ದೇವ್ ವರ್ಮಾ ಅವರನ್ನು ತೆಲಂಗಾಣದ ನೂತನ ರಾಜ್ಯಪಾಲರನ್ನಾಗಿ ನೇಮಿಸಲಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ವಿಶ್ವಾಸಾರ್ಹ ಸಹಾಯಕರಲ್ಲಿ ಒಬ್ಬರಾದ ಮಾಜಿ ಐಎಎಸ್ ಅಧಿಕಾರಿ ಕೆ.ಕೈಲಾಶ್‌ನಾಥನ್‌ ಅವರನ್ನು ಪುದುಚೇರಿಯ ಲೆಫ್ಟಿನೆಂಟ್ ಗವರ್ನರ್ ಆಗಿ ನೇಮಕ ಮಾಡಲಾಗಿದೆ. ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರ ಮುಖ್ಯ ಪ್ರಧಾನ ಕಾರ್ಯದರ್ಶಿಯಾಗಿದ್ದ ಕೈಲಾಶ್‌ನಾಥನ್‌ ಜೂನ್ 30ರಂದು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದರು.

ಮಹಾರಾಷ್ಟ್ರದ ಬಿಜೆಪಿಯ ಹಿರಿಯ ನಾಯಕ ಹರಿಭಾವು ಕಿಸಾನ್ ರಾವ್ ಬಾಗ್ಡೆ ಅವರನ್ನು ರಾಜಸ್ಥಾನದ ರಾಜ್ಯಪಾಲರನ್ನಾಗಿ ನೇಮಿಸಲಾಗಿದೆ. ಅಸ್ಸಾಂನ ಮಾಜಿ ಲೋಕಸಭಾ ಸದಸ್ಯ ರಾಮನ್ ದೇಕಾ ಅವರನ್ನು ಛತ್ತೀಸ್ ಗಢದ ರಾಜ್ಯಪಾಲರನ್ನಾಗಿ ನೇಮಿಸಲಾಗಿದೆ.

ಹೊಸ ರಾಜ್ಯಪಾಲರು
ಮೇಘಾಲಯ-ಸಿ.ಎಚ್.ವಿಜಯ ಶಂಕರ್,

ರಾಜಸ್ಥಾನ-ಹರಿಭಾವು ಕಿಸಾನ್ ರಾವ್ ಬಾಗ್ಡೆ,

ತೆಲಂಗಾಣ-ಜಿಷ್ಣು ದೇವ್ ವರ್ಮಾ

ಸಿಕ್ಕಿಂ-ಓಂ ಪ್ರಕಾಶ್ ಮಾಥುರ್

ಜಾರ್ಖಂಡ್-ಸಂತೋಷ್ ಕುಮಾರ್ ಗಂಗ್ವಾರ್

ಛತ್ತೀಸ್‌ಗಢ-ರಾಮನ್ ದೇಕಾ

ಮಹಾರಾಷ್ಟ್ರ-ಸಿ.ಪಿ. ರಾಧಾಕೃಷ್ಣನ್

ಪಂಜಾಬ್ -ಗುಲಾಬ್ ಚಂದ್ ಕಟಾರಿಯಾ

ಅಸ್ಸಾಂ-ಮಣಿಪುರ ಲಕ್ಷ್ಮಣ್ ಪ್ರಸಾದ್ ಆಚಾರ್ಯ

ವಿಜಯಶಂಕರ್ ಪರಿಚಯ : ಮೈಸೂರು ರಾಜಕುಮಾರ ಮತ್ತು 1399 ಮತ್ತು 1950 ರ ನಡುವೆ ಮೈಸೂರು ಸಾಮ್ರಾಜ್ಯವನ್ನು ಆಳಿದ ಒಡೆಯರ್ ರಾಜವಂಶದ ಮುಖ್ಯಸ್ಥರಾಗಿದ್ದ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ವಿರುದ್ಧ 2004 ರಲ್ಲಿ ಮೈಸೂರು ಲೋಕಸಭಾ ಕ್ಷೇತ್ರಕ್ಕೆ ವಿಜಯಶಂಕರ್ ಮರು ಆಯ್ಕೆಯಾದರು.

ಅವರು ಈ ಕೆಳಗಿನ ಖಾತೆಗಳನ್ನು ಹೊಂದಿರುವ ಕರ್ನಾಟಕ ಸರ್ಕಾರದಲ್ಲಿ ಕ್ಯಾಬಿನೆಟ್ ಮಂತ್ರಿಯಾಗಿ ಸೇವೆ ಸಲ್ಲಿಸಿದ್ದಾರೆ. ಅರಣ್ಯ, ಪರಿಸರ ಮತ್ತು ಪರಿಸರ ಇಲಾಖೆಯಿಂದ ಅರಣ್ಯ ಇಲಾಖೆ ಹಾಗೂ ಇಲಾಖೆಯಿಂದ ಸಣ್ಣ ಪ್ರಮಾಣದ ಕೈಗಾರಿಕೆಗಳು.

ಅವರು 2014 ರ ಲೋಕಸಭಾ ಚುನಾವಣೆಯಲ್ಲಿ ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡರ ವಿರುದ್ಧ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ 2014 ರಲ್ಲಿ ಹಾಸನ ಕ್ಷೇತ್ರದಿಂದ ಸ್ಪರ್ಧಿಸಿ ವಿಫಲರಾಗಿದ್ದಾರೆ.

ಅವರು 15 ಜೂನ್ 2010 ರಿಂದ ಜನವರಿ 2016 ರಲ್ಲಿ ತಮ್ಮ ಅಧಿಕಾರಾವಧಿಯ ಅಂತ್ಯದವರೆಗೆ ಕರ್ನಾಟಕ ವಿಧಾನ ಪರಿಷತ್ತಿನ ಸದಸ್ಯರಾಗಿದ್ದರು .

ಅವರು ಭಾರತೀಯ ಜನತಾ ಪಕ್ಷಕ್ಕೆ ರಾಜೀನಾಮೆ ನೀಡಿದರು ಮತ್ತು ಅಕ್ಟೋಬರ್ 2017 ರಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಸೇರಿದರು. ಅವರು ನವೆಂಬರ್ 2019 ರಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಮರುಸೇರ್ಪಡೆಯಾದರು.

ಬಿಜೆಪಿ ಸರ್ಕಾರದಲ್ಲಿ ಪರಿಸರ ಖಾತೆ ಸಚಿವರಾಗಿದ್ದ ಅವಧಿಯಲ್ಲಿ ಅವರು ರಾಜ್ಯದಲ್ಲಿ ಪರಿಸರಕ್ಕೆ ಮಾರಕವಾಗಿರುವ ಅಕೇಶಿಯಾ ಮತ್ತು ನೀಲಗಿರಿಯನ್ನು ಇನ್ನು ಮುಂದೆ ಬೆಳೆಸಬಾರದು ಎಂದು ಹೇಳಿದ್ದರು. ಜೊತೆಗೆ ಇವುಗಳ ಸರ್ವ ನಾಶಕ್ಕೆ ಜನತೆಗೆ ಕರೆ ನೀಡಿ ಗಮನ ಸೆಳೆದಿದ್ದರು.