ಬೆಂಗಳೂರು :
ರಿಷಬ್ ಶೆಟ್ಟಿ ನಿರ್ದೇಶನ, ನಟನೆ, ಹೊಂಬಾಳೆ ಫಿಲಂಸ್ ನಿರ್ಮಾಣದ ‘ಕಾಂತಾರ ಚಾಪ್ಟರ್ 1’ ಸಿನಿಮಾದ ಫಸ್ಟ್ ಲುಕ್ ಇಂದು ಮಧ್ಯಾಹ್ನ 12.25 ಬಿಡುಗಡೆಯಾಗಲಿದೆ.

ಈ ಬಗ್ಗೆ ಅಧಿಕೃತ ಪ್ರಕಟಣೆ ನೀಡಿರುವ ಹೊಂಬಾಳೆ ಫಿಲಂಸ್, ತನ್ನ ಅಧಿಕೃತ ಸೋಷಿಯಲ್ ಮೀಡಿಯಾ ಖಾತೆಯಲ್ಲಿ, ‘ಪ್ರತಿ ಕ್ಷಣವೂ ದೈವಿಕ ಸ್ಪರ್ಶವನ್ನು ಅನುಭವಿಸುವ ಜತೆ ಇತಿಹಾಸದ ನಿಗೂಢ ಸತ್ಯವನ್ನು ಅನ್ವೇಷಿಸುವ ಪ್ರಯತ್ನವಿದು. ಹಿಂದೆಂದೂ ನೋಡದ ವಿಸ್ಮಯವನ್ನು ಕಣ್ಣುಂಬಿಕೊಳ್ಳಲು ನಿರೀಕ್ಷಿಸಿ. ಇದು ಬರಿ ಬೆಳಕಲ್ಲ, ದರ್ಶನ’ ಎಂದು ಬರೆದುಕೊಂಡಿದೆ.

ಕನ್ನಡ, ಹಿಂದಿ, ತಮಿಳು, ತೆಲುಗು, ಮಲಯಾಳಂ, ಬೆಂಗಾಲಿ ಹಾಗೂ ಇಂಗ್ಲೀಷ್ ಭಾಷೆಗಳಲ್ಲಿ ಈ ಚಿತ್ರ ನಿರ್ಮಾಣವಾಗಲಿದೆ.