ಕಾಪು (ಪಡುಬಿದ್ರಿ): ಇಲ್ಲಿನ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಕೇಂದ್ರ ಸಚಿವ ಪ್ರಲ್ಲಾದ ಜೋಶಿ ದಂಪತಿ ಶನಿವಾರ ಭೇಟಿ ನೀಡಿ ಪೂಜೆ ಸಲ್ಲಿಸಿದರು.

ದೇವಳದ ವತಿಯಿಂದ ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಡಿಕೆರೆ ರತ್ನಾಕರ ಶೆಟ್ಟಿ ಅವರು ಪ್ರಲ್ಲಾದ್ ಜೋಶಿ ದಂಪತಿಯನ್ನು ಸನ್ಮಾನಿಸಿದರು. ದೇವಳದ ಪ್ರಧಾನ ಅರ್ಚಕ ಶ್ರೀಧರ ತಂತ್ರಿ ಪೂಜೆ ಸಲ್ಲಿಸಿ ಪ್ರಸಾದ ವಿತರಿಸಿದರು.

ಮಾಧ್ಯಮದೊಂದಿಗೆ ಮಾತನಾಡಿದ ಪ್ರಲ್ಲಾದ ಅವರು, ದೇವಸ್ಥಾನ ಭಕ್ತರ ದೇಣಿಗೆಯಿಂದ ಅತ್ಯದ್ಭುತವಾಗಿ ಮೂಡಿ ಬಂದಿದೆ ಎಂದರು.

ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ, ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಸಂಸದ ಕೋಟ ಶ್ರೀನಿವಾಸ ಪೂಜಾರಿ, ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಡಿಕೆರೆ ರತ್ನಾಕರ ಶೆಟ್ಟಿ, ಯೋಗೀಶ್ ವಿ. ಶೆಟ್ಟಿ, ರಮೇಶ್ ಹೆಗಡೆ ಕಲ್ಯ, ಅರುಣ್ ಶೆಟ್ಟಿ ಪಾದೂರು, ಗೀತಾಂಜಲಿ ಸುವರ್ಣ, ಬಿಜೆಪಿ ಮುಖಂಡರು ಭಾಗವಹಿಸಿದ್ದರು.