
ಕಾಪು: ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಶ್ರೀ ಚಕ್ರ ಸಹಿತವಾಗಿ ಪ್ರತಿಷ್ಠಾಪನೆಗೊಂಡಿರುವ ಮಹಾ ಸ್ವರ್ಣಪೀಠ ಸಹಿತ ಸ್ವರ್ಣ ಗದ್ದುಗೆಯಲ್ಲಿ ಪ್ರತಿಷ್ಠಾಪನೆಗೊಂಡಿರುವ ಶ್ರೀ ಮಾರಿಯಮ್ಮ ದೇವರಿಗೆ ಕೊರಂಗ್ರಪಾಡಿ ವೇ| ಮೂ| ಕೆ. ಜಿ. ರಾಘವೇಂದ್ರ ತಂತ್ರಿಗಳ ಮಾರ್ಗದರ್ಶನದಲ್ಲಿ ಪ್ರಧಾನ ತಂತ್ರಿ ಕೊರಂಗ್ರಪಾಡಿ ಕೆ. ಪಿ. ಕುಮಾರಗುರು ತಂತ್ರಿಗಳ ನೇತೃತ್ವದಲ್ಲಿ, ಅರ್ಚಕ ವೇ| ಮೂ| ಕಲ್ಯ ಶ್ರೀನಿವಾಸ ತಂತ್ರಿಯವರ ಸಹಯೋಗದೊಂದಿಗೆ ಮಾ. 5ರಂದು ಮಹಾಬ್ರಹ್ಮಕಲಶಾಭಿಷೇಕ ನಡೆಯಲಿದೆ.