ಬೆಳಗಾವಿ :
ನಗರದ ವಿವಿಧ ಕಡೆ ಅಳವಡಿಸಿರುವ ಜಾಹೀರಾತು ಫಲಕಗಳಲ್ಲಿ ಕನ್ನಡ ಕಡೆಗಣಿಸಲಾಗಿದೆ. ಅವರ ವಿರುದ್ಧ ಸೂಕ್ತ ಕ್ರಮ ಜರುಗಿಸುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆಯ ನಾರಾಯಣಗೌಡ ಬಣದ ಕಾರ್ಯಕರ್ತರು ನಗರದ ಚನ್ನಮ್ಮ ವೃತ್ತದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.
ಇಂಗ್ಲೀಷ್ ಭಾಷೆಯಲ್ಲಿದ್ದ ಜಾಹೀರಾತು ಫಲಕಗಳಿಗೆ ಮಸಿ ಬಳಿದ ಕಾರ್ಯಕರ್ತರು ಜಿಲ್ಲಾಡಳಿತ ವಿರುದ್ಧ ಘೋಷಣೆ ಕೂಗಿದರು. ಪೊಲೀಸರು ಕಾರ್ಯಕರ್ತರನ್ನು ತಡೆಯಲು ಯತ್ನಿಸಿದರು. ಆಗ ಕಾರ್ಯಕರ್ತರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು.