Join The Telegram | Join The WhatsApp |
ಬೆಂಗಳೂರು-
ಭಯೋತ್ಪಾದಕ ಸಂಘಟನೆಗಳ ಜೊತೆ ಸಂಪರ್ಕ ಹೊಂದಿದೆ ಎನ್ನಲಾದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸಂಘಟನೆಯನ್ನು ಕೇಂದ್ರ ಸರ್ಕಾರ ನಿಷೇಧಿಸಿದ್ದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಸೋಮವಾರ ಪೂರ್ಣಗೊಳಿಸಿದೆ.
ಕರ್ನಾಟಕದ ಪಿಎಫ್‌ಐ ಅಧ್ಯಕ್ಷ ನಾಸಿರ್ ಅಲಿ ಸಲ್ಲಿಸಿದ್ದ ಅರ್ಜಿ ಕುರಿತಂತೆ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯಪೀಠ ಸೋಮವಾರ ಅರ್ಜಿದಾರರ ಹಾಗೂ ಕೇಂದ್ರ ಸರ್ಕಾರಿ ವಕೀಲರ ವಾದ ಆಲಿಸಿದ ಬಳಿಕ ವಿಚಾರಣೆ ಪೂರ್ಣಗೊಳಿಸಿ, ತೀರ್ಪು ಕಾಯ್ದಿರಿಸಿತು.
ಅರ್ಜಿದಾರರ ಪರ ವಾದಿಸಿದ ಹೈಕೋರ್ಟ್‌ನ ಹಿರಿಯ ನ್ಯಾಯವಾದಿ ದೇಶದ್ರೋಹ ಚಟುವಟಿಕೆಗಳ ನಿಯಂತ್ರಣ ಕಾಯ್ದೆ (ಯುಎಪಿಎ) ಅಡಿ ಪಿಎಫ್‌ಐ ನಿರ್ಬಂಧಿಸಿರುವುದು ಕಾನೂನು ಬಾಹಿರವಾಗಿದೆ. ಸಂಘಟನೆಯನ್ನು ಕಾನೂನುಬಾಹಿರ ಸಂಘಟನೆ ಎಂದು ಘೋಷಿಸಿರುವುದು ಸಂವಿಧಾನ ವಿರೋಧಿ ಕ್ರಮವಾಗಿದೆ. ಕಾನೂನುಬಾಹಿರ ಸಂಘಟನೆ ಎನ್ನಲು ಕಾರಣ ನೀಡಿಲ್ಲ ಮತ್ತು ತಕ್ಷಣದಿಂದಲೇ ಅನ್ವಯವಾಗುವಂತೆ ನಿಷೇಧಿಸಿರುವುದಕ್ಕೆ ಪ್ರತ್ಯೇಕ ಕಾರಣ ನೀಡಿಲ್ಲ ಎಂದರು.
Join The Telegram | Join The WhatsApp |