ಮಂಗಳೂರು : ಕರುನಾಡ ಸಿಂಗಂ ಎಂದೇ ಖ್ಯಾತರಾದ ಅಣ್ಣಾಮಲೈ ಇದೀಗ ಕರಾವಳಿಯಲ್ಲಿ ಅಬ್ಬರದ ಚುನಾವಣಾ ಪ್ರಚಾರಕ್ಕೆ ಆಗಮಿಸಲಿದ್ದಾರೆ. ಐಪಿಎಸ್ ಅಧಿಕಾರಿಯಾಗಿ ಕರಾವಳಿಯಲ್ಲಿ ಅವರು ಕಾರ್ಯನಿರ್ವಹಿಸಿದ್ದರು.

ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರದಲ್ಲಿ ಬೂತ್‌ ಮಟ್ಟದಲ್ಲಿ ಒಂದು ಸುತ್ತಿನ ಮನೆ ಮನೆ ಸಂಪರ್ಕ ಆಗಿದೆ. 1876 ಬೂತ್ ಗಳಲ್ಲಿಯೂ ಪ್ರಚಾರ ಕಾರ್ಯ ಕೈಗೊಂಡಿದ್ದೇವೆ. ಇನ್ನೊಂದು ಸುತ್ತಿನ ಮನೆ ಮನೆ ಸಂಪರ್ಕ ಆಗಲಿದೆ. ಅದಕ್ಕೂ ಮುನ್ನ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮತ್ತು ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಜಿಲ್ಲೆಯಲ್ಲಿ ಪ್ರಚಾರಕ್ಕೆ ಬರಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಹೇಳಿದ್ದಾರೆ.

ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ ಅವರು, ಎಪ್ರಿಲ್ 20ರಂದು ಬಿವೈ ವಿಜಯೇಂದ್ರ ಬೆಳ್ತಂಗಡಿ ಮತ್ತು ಬಂಟ್ವಾಳದಲ್ಲಿ ಪ್ರಚಾರ ಸಭೆ ನಡೆಸಲಿದ್ದಾರೆ. 22ರಂದು ಅಣ್ಣಾಮಲೈ ಪ್ರಚಾರ ಕಾರ್ಯ ನಡೆಸಲಿದ್ದಾರೆ. ಅಣ್ಣಾಮಲೈ ಮಂಗಳೂರು ಹಾಗೂ ಪುತ್ತೂರಿಗೆ ತೆರಳಿ ಪ್ರಚಾರ ಕಾರ್ಯ ನಡೆಸಲಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು 61 ಕಡೆ ಸಾರ್ವಜನಿಕ ಸಭೆ ಆಯೋಜಿಸಲಾಗಿದೆ. ఎప్రిలో 19ರಂದು ಮಂಗಳೂರಿನಲ್ಲಿ ವಕೀಲರ ಸಮಾವೇಶ ನಡೆಯಲಿದ್ದು, ಅದರಲ್ಲಿ ಪಕ್ಷದ ರಾಷ್ಟ್ರೀಯ ನಾಯಕ ಗೌರವ್ ಭಾಟಿಯಾ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.