ಬೆಂಗಳೂರು: ಕರ್ನಾಟಕದಲ್ಲಿ ಮೊದಲ ಹಂತದಲ್ಲಿ ನಡೆಯಲಿರುವ 14 ಲೋಕಸಭಾ ಕ್ಷೇತ್ರಗಳ ಚುನಾವಣೆಯ ನಾಮಪತ್ರ ಸಲ್ಲಿಕೆ ಇಂದಿನಿಂದ (ಮಾರ್ಚ್‌ 28) ಆರಂಭವಾಗುತ್ತಿದೆ.

14 ಕ್ಷೇತ್ರಗಳಲ್ಲಿ ಬಿಜೆಪಿ–ಜೆಡಿಎಸ್‌ ಮೈತ್ರಿ ಕೂಟ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಿದ್ದು, ಒಟ್ಟಾಗಿಯೇ ಚುನಾವಣೆ ಎದುರಿಸಲಿದೆ. ಬಿಜೆಪಿ ಪಾಲಿಗೆ ಬಂದ 11 ಕ್ಷೇತ್ರಗಳ ಅಭ್ಯರ್ಥಿಗಳು ಆಖೈರುಗೊಂಡಿದ್ದು, ತನ್ನ ಪಾಲಿಗೆ ಸಿಕ್ಕಿದ ಮೂರು ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಜೆಡಿಎಸ್‌ ಇನ್ನೂ ಅಧಿಕೃತವಾಗಿ ಪ್ರಕಟಿಸಿಲ್ಲ.

ಚಿಕ್ಕಬಳ್ಳಾಪುರ, ಕೋಲಾರ ಹಾಗೂ ಚಾಮರಾಜನಗರ ಹೊರತುಪಡಿಸಿ ಉಳಿದ 11 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಕಾಂಗ್ರೆಸ್‌ ಘೋಷಿಸಿದೆ.