Join The Telegram | Join The WhatsApp |
ಬೆಂಗಳೂರು-
ಕಾಂಗ್ರೆಸ್ ಪಕ್ಷದ ಶಿಸ್ತು ಪಾಲನಾ ಸಮಿತಿ ನೀಡಿರುವ ನೋಟಿಸಿಗೆ ಈವರೆಗೆ ಉತ್ತರಿಸದ ಕೆಜಿಎಫ್ ಬಾಬು ಅವರನ್ನು ಕಾಂಗ್ರೆಸ್ ಪಕ್ಷದಿಂದ ಅಮಾನತುಗೊಳಿಸಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಆದೇಶ ಹೊರಡಿಸಿದೆ.
ಈ ಕುರಿತು ಕೆಪಿಸಿಸಿ ಶಿಸ್ತುಪಾಲನಾ ಸಮಿತಿಯ ಮುಖ್ಯಸ್ಥ ಕೆ. ರಹಮಾನ್ ಖಾನ್ ಆದೇಶ ಹೊರಡಿಸಿದ್ದು, ಆದೇಶದಲ್ಲಿ ಮೂರು ತಿಂಗಳ ಹಿಂದೆಯೇ ಪಕ್ಷದ ನೀತಿ ವಿರುದ್ಧವಾಗಿ ಮಾಧ್ಯಮದವರಿಗೆ ಹೇಳಿಕೆ ನೀಡಿರುವ ಬಗ್ಗೆ ಶಿಸ್ತು ಪಾಲನ ಸಮಿತಿಯಿಂದ ಕಾರಣ ಕೇಳಿ ನೋಟಿಸ್ ನೀಡಲಾಗಿತ್ತು, ಆದರೆ ಇದಕ್ಕೆ ಸಮಂಜಸ ಉತ್ತರವನ್ನು ಈವರೆಗೆ ನೀಡಿಲ್ಲ ಎಂದು ತಿಳಿಸಲಾಗಿದೆ. ಅಲ್ಲದೆ, ಶುಕ್ರವಾರವೂ ನೀವು ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಅಧ್ಯಕ್ಷರ ಪೂರ್ವಾನುಮತಿ ಇಲ್ಲದೇ ಕಾಂಗ್ರೆಸ್ ಪಕ್ಷವನ್ನು ಉದ್ದೇಶಿಸಿ ವಿವಿಧ ಹೇಳಿಕೆಯನ್ನು ಮಾಧ್ಯಮಕ್ಕೆ ನೀಡಿದ್ದೀರಿ. ಈ ನಡೆಯೂ ಪಕ್ಷಕ್ಕೆ ಹಾನಿಯುಂಟು ಮಾಡುತ್ತಿದೆ ಹಾಗೂ ಪಕ್ಷದ ಹಿನ್ನೆಡೆಗೆ ಕಾರಣವಾಗುತ್ತಿದೆ, ಇದನ್ನು ಗಂಭೀರವಾಗಿ ಪರಿಗಮಿಸಿ, ಈ ಕೂಡಲೇ ನಿಮ್ಮನ್ನು ಪಕ್ಷದಿಂದ ಅಮಾನತುಗೊಳಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
Join The Telegram | Join The WhatsApp |