Join The Telegram | Join The WhatsApp |
ಬೆಳಗಾವಿ :
ಕಮಲ ಪಕ್ಷ ಬೆಳಗಾವಿ ದಕ್ಷಿಣ ಮತಕ್ಷೇತ್ರದಲ್ಲಿ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಹೊಸ ಮುಖ ಕಣಕ್ಕೆ ಇಳಿಸಲಿದೆಯೇ ಎಂಬ ಚರ್ಚೆ ಗ್ರಾಸವಾಗಿದೆ.
ಬಿಜೆಪಿಯಿಂದ ಬೆಳಗಾವಿ ದಕ್ಷಿಣದಿಂದ ಸ್ಪರ್ಧಿಸಲು ಕಿರಣ ಜಾಧವ ದೆಹಲಿಯಲ್ಲಿ ಕಾಣಿಸಿಕೊಂಡು ಅಚ್ಚರಿ ಮೂಡಿಸಿದ್ದಾರೆ.
ಬೆಳಗಾವಿ ದಕ್ಷಿಣ ಮತಕ್ಷೇತ್ರದಲ್ಲಿ ಸದ್ಯ ಅಭಯ್ ಪಾಟೀಲ್ ಬಿಜೆಪಿಯಿಂದ ಶಾಸಕರಾಗಿದ್ದಾರೆ. ಆದರೆ, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬೆಳಗಾವಿ ದಕ್ಷಿಣ ಮತಕ್ಷೇತ್ರದಲ್ಲಿ ಸ್ಪರ್ಧಿಸಲು ಮರಾಠಾ ಸಮಾಜದ ನಾಯಕ ಕಿರಣ ಜಾಧವ ಆಸಕ್ತರಾಗಿದ್ದು ಇದೀಗ ದೆಹಲಿಯಲ್ಲಿ ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರ ಜತೆ ಕಾಣಿಸಿಕೊಂಡಿದ್ದಾರೆ. ಕಿರಣ್ ಜಾಧವ್ ಈ ಮೊದಲು ಬೆಳಗಾವಿ ಉತ್ತರ ವಿಧಾನಸಭಾ ಮತಕ್ಷೇತ್ರದಲ್ಲಿ ಸ್ಪರ್ಧಿಸಿ ಸೋಲು ಅನುಭವಿಸಿದ್ದರು. ಆದರೆ ನಂತರದ ದಿನಗಳಲ್ಲಿ ಬಿಜೆಪಿಯ ಸಂಘಟನೆಯಲ್ಲಿ ಕ್ರಿಯಾಶೀಲವಾಗಿ ಗುರುತಿಸಿಕೊಂಡು ಪಕ್ಷವನ್ನು ಕಟ್ಟುವ ನಿಟ್ಟಿನಲ್ಲಿ ಪ್ರಯತ್ನಿಸಿದ್ದಾರೆ. ಜೊತೆಗೆ ಮರಾಠಾ ಸಮಾಜದ ಮೂಲಕ ತಮಗೆ ಬಿಜೆಪಿ ಟಿಕೆಟ್ ನೀಡುವಂತೆ ಅವರು ಪ್ರಯತ್ನ ನಡೆಸಿದ್ದಾರೆ.
ಪಕ್ಷದ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರನ್ನು ಭೇಟಿಯಾಗಿದ್ದಾರೆ.
Join The Telegram | Join The WhatsApp |