ಉಡುಪಿ :
ಬಿಜೆಪಿ ಉಡುಪಿ ಜಿಲ್ಲಾ ನೂತನ ಅಧ್ಯಕ್ಷರಾಗಿ ನೇಮಕಗೊಂಡ ಕಿಶೋರ್ ಕುಮಾರ್ ಕುಂದಾಪುರ ಇಂದು ಜಿಲ್ಲಾಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.

ನಿಕಟಪೂರ್ವ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಪಕ್ಷದ ಧ್ವಜವನ್ನು ನೂತನ ಜಿಲ್ಲಾಧ್ಯಕ್ಷರಿಗೆ ನೀಡುವ ಮೂಲಕ ಅಧಿಕಾರ ಹಸ್ತಾಂತರಿಸಿದರು.

ಬಳಿಕ ಮಾತನಾಡಿದ ಕಿಶೋರ್ ಕುಮಾರ್, ಜಿಲ್ಲೆಯಲ್ಲಿ ಬಿಜೆಪಿ ಪಕ್ಷ ಸಂಘಟನೆಗೆ ಇನ್ನಷ್ಟು ಹೆಚ್ಚಿನ ಆದ್ಯತೆ ನೀಡಲಾಗುವುದು. ಮುಂದಿನ ತಾಪಂ, ಜಿಪಂ, ಲೋಕಸಭಾ ಚುನಾವಣೆಗೆ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಲಾಗುವುದು ಎಂದು ಹೇಳಿದರು.

ಈ ಸಂದರ್ಭದಲ್ಲಿ ಶಾಸಕರಾದ ಗುರುರಾಜ್ ಶೆಟ್ಟಿ ಗಂಟಿಹೊಳೆ, ಕಿರಣ್ ಕುಮಾರ್ ಕೊಡ್ಗಿ, ವಿಧಾನ ಪರಿಷತ್‌ನ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಬಿಜೆಪಿ ಮಂಗಳೂರು ವಿಭಾಗೀಯ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ಮುಖಂಡ ಮನೋಹರ್ ಎಸ್.ಕಲ್ಮಾಡಿ ಉಪಸ್ಥಿತರಿದ್ದರು.