ಉಡುಪಿ :
ಉಡುಪಿ ಜಿಲ್ಲಾ ನೂತನ
ಅಧ್ಯಕ್ಷರಾಗಿ ಕಿಶೋರ್ ಕುಂದಾಪುರ ಅವರನ್ನು ನೇಮಕ ಮಾಡಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆದೇಶ ಹೊರಡಿಸಿದ್ದಾರೆ.
ಕಿಶೋರ್ ಬಿಜೆಪಿಯ ಸಕ್ರಿಯ ಕಾರ್ಯಕರ್ತರಾಗಿದ್ದು, ಉಪಾಧ್ಯಕ್ಷ ಸಹಿತ ಹಲವು ಹುದ್ದೆಗಳನ್ನು ನಿಭಾಯಿಸಿದ್ದಾರೆ. 2013 ರಲ್ಲಿ ಅಂದಿನ ಕುಂದಾಪುರ ಶಾಸಕ ಶ್ರೀನಿವಾಸ ಶೆಟ್ಟಿ ಅವರು ಬಿಜೆಪಿ ಬಿಟ್ಟು ಸ್ಪರ್ಧೆ ಮಾಡಿದ್ದಾಗ, ಕಿಶೋರ್ ಕುಮಾರ್ ಬಿಜೆಪಿಯಿಂದ ಸ್ಪರ್ಧಿಸಿದ್ದರು. ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಮೂರು ಸಲ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿರುವ ನವೀನ ಕುತ್ಯಾರು, ಉಡುಪಿ ನಗರ ಅಧ್ಯಕ್ಷ ಮಹೇಶ ಠಾಕೂರ್ ಪ್ರಬಲ ಸ್ಪರ್ಧಿಗಳಾಗಿದ್ದರು.