ಬೆಳಗಾವಿ : ಅಮಾನುಷ ಅತ್ಯಾಚಾರ ಮತ್ತು ಕೊಲೆಗೆ ಬಲಿಯಾದ ಕೊಲ್ಕತ್ತಾ ವೈದ್ಯೆ ಕುಟುಂಬಕ್ಕೆ ನ್ಯಾಯ ದೊರೆಕಿಸಿಕೊಡುವಂತೆ ಕೋರಿ ಭಾರತದಾದ್ಯಂತ ಬಿಜೆಪಿ ಮಹಿಳಾ ಮೋರ್ಚಾ ಮೇಣದ ಬತ್ತಿ ಹಚ್ಚಿ ಪ್ರತಿಭಟನೆ ನಡೆಸಿತು. ಬೆಳಗಾವಿಯಲ್ಲೂ ಮಹಿಳಾ ಮೋರ್ಚಾದವರು ಪ್ರತಿಭಟನೆ ನಡೆಸಿದರು.

ಬೆಳಗಾವಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ನಯನಾ ಭಸ್ಮೆ, ಕರ್ನಾಟಕ ಮಹಿಳಾ ಮೋರ್ಚಾ ಕಾರ್ಯದರ್ಶಿ ಡಾ.ಸೋನಾಲಿ ಸರ್ನೋಬತ್, ಬೆಳಗಾವಿ ಮಹಿಳಾ ಮೋರ್ಚಾ ಕಾರ್ಯದರ್ಶಿ ಭಾಗ್ಯಶ್ರೀ ಕೋಕಿತಕರ್, ಪ್ರಿಯಾಂಕಾ ಅಜರೇಕರ ಸೇರಿದಂತೆ ಇತರೆ ಕಾರ್ಯಕರ್ತರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಮಹಿಳಾ ಮೋರ್ಚಾ ಹಮ್ಮಿಕೊಂಡ ಕಾರ್ಯಕ್ರಮವನ್ನು ಮಾಜಿ ಶಾಸಕ ಸಂಜಯ ಪಾಟೀಲ, ಬೆಳಗಾವಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಸುಭಾಷ ಪಾಟೀಲ, ಬೆಳಗಾವಿ ಗ್ರಾಮೀಣ ಮಂಡಲದ ಅಧ್ಯಕ್ಷ ಧನಂಜಯ ಜಾಧವ ಉಪಸ್ಥಿತರಿದ್ದು ಬೆಂಬಲಿಸಿದರು.