ನವದೆಹಲಿ: ನರೇಂದ್ರ ಮೋದಿ ಅವರು ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲು ಸಿದ್ಧರಾಗಿದ್ದಾರೆ. ಜೂನ್‌ 9ರಂದು ಸಂಜೆ 6 ಗಂಟೆಗೆ ಮೋದಿ ಅವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇದಕ್ಕೂ ಮೊದಲು, ತಮ್ಮ ರಾಜಕೀಯ ಗುರು, ಬಿಜೆಪಿ ಹಿರಿಯ ನಾಯಕ ಎಲ್‌.ಕೆ.ಅಡ್ವಾಣಿ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದಿದ್ದಾರೆ. ದೆಹಲಿಯಲ್ಲಿರುವ ಎಲ್‌.ಕೆ.ಅಡ್ವಾಣಿ ಅವರ ನಿವಾಸಕ್ಕೆ ತೆರಳಿದ ಮೋದಿ ಅವರು ಅಡ್ವಾಣಿ ಅವರ ಜತೆ ಮಾತುಕತೆ ನಡೆಸಿ, ಆಶೀರ್ವಾದ ಪಡೆದರು.

ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮತ್ತು ಅವರ ಪತ್ನಿಯನ್ನು ಭೇಟಿಯಾದ ಮೋದಿ ಅವರು ಇಬ್ಬರ ಆಶೀರ್ವಾದ ಪಡೆದುಕೊಂಡರು.