
ಬೆಳಗಾವಿ: ಪ್ರಯಾಗ್ ರಾಜ್ ಮಹಾಕುಂಭ ಮೇಳದಲ್ಲಿ
ಸಂಭವಿಸಿದ ಕಾಲ್ತುಳಿತದಲ್ಲಿ ಮೃತರಾದ ವಡಗಾವಿಯ ಜ್ಯೋತಿ ಹತ್ತರವಾಟ ಮತ್ತು ಅವರ ಪುತ್ರಿ ಮೇಘಾ ಅವರ ಮೃತದೇಹಗಳನ್ನು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಗುರುವಾರ ಮಧ್ಯರಾತ್ರಿ ಬರಮಾಡಿಕೊಂಡರು.
ತಾಯಿ-ಮಗಳ ಪಾರ್ಥಿವ ಶರೀರಗಳಿಗೆ ಜಿಲ್ಲಾಧಿಕಾರಿ ಪುಷ್ಪನಮನ ಸಲ್ಲಿಸಿದರು. ವಿಶೇಷ ಜಿಲ್ಲಾಧಿಕಾರಿ ಹರ್ಷಾ ಶೆಟ್ಟಿ, ಹೆಚ್ಚುವರಿ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ ಉಪಸ್ಥಿತರಿದ್ದು ಮೃತರಿಗೆ ಗೌರವ ಸಲ್ಲಿಸಿದರು.
ದೆಹಲಿಯಿಂದ ಗೋವಾಗೆ ವಿಮಾನದಲ್ಲಿ ತಾಯಿ-ಮಗಳ ಪಾರ್ಥಿವ ಶರೀರ ತರಲಾಯಿತು. ಬಳಿಕ ಗೋವಾದಿಂದ ಬೆಳಗಾವಿಗೆ ಆಂಬುಲೆನ್ಸ್ ಮೂಲಕ ರವಾನಿಸಲಾಗಿದೆ. ಜಿಲ್ಲಾಸ್ಪತ್ರೆ ಶವಾಗಾರದಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಕುಟುಂಬಸ್ಥರಿಗೆ ಹಸ್ತಾಂತರಿಸಲಾಯಿತು.
ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಕುಂಭಮೇಳಕ್ಕೆ ಹೋಗಿದ್ದ ಬೆಳಗಾವಿಯ ನಾಲ್ವರು ಕಾಲ್ತುಳಿತದಲ್ಲಿ ಮೃತಪಟ್ಟಿದ್ದರು.