ಕುಮಟಾ :
ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇರೆಗೆ ಕುಮಟಾ ಪೊಲೀಸರು ಸಂಸದ ಅನಂತ ಕುಮಾರ್ ಹೆಗಡೆ ವಿರುದ್ಧ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಧಾರ್ಮಿಕ ಭಾವನೆಗೆ ಧಕ್ಕೆ ತರುವ ಹೇಳಿಕೆ ನೀಡಿರುವ ಜೊತೆಗೆ ಸಾಮಾಜಿಕ ಅಶಾಂತಿಗೆ ಕಾರಣವಾಗಿರುವ ಮಾತುಗಳನ್ನು ಆಡಿದ ಹಿನ್ನೆಲೆಯಲ್ಲಿ ಅವರ ಮೇಲೆ ಸೆಕ್ಷನ್ 153 ಎ, 505 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಕುಮಟಾದಲ್ಲಿ ನಡೆದ ಸಭೆಯಲ್ಲಿ ಸಂಸದರು ಮಾಡಿರುವ ಭಾಷಣ ಆಕ್ಷೇಪಾರ್ಹವಾಗಿರುವ ಕಾರಣಕ್ಕೆ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಎಸ್ ಪಿ ಎನ್. ವಿಷ್ಣುವರ್ಧನ ತಿಳಿಸಿದ್ದಾರೆ.

ಶನಿವಾರ ಆನಂತ ಕುಮಾರ್ ಹೆಗಡೆ ಅವರು ಕುಮಟಾದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ಭಟ್ಕಳ, ಶಿರಸಿ, ಶ್ರೀರಂಗಪಟ್ಟಣದ ಮಸೀದಿಗಳು ಈ ಹಿಂದೆ ದೇವಸ್ಥಾನಗಳಾಗಿದ್ದವು. ಅವುಗಳನ್ನು ಬಾಬರಿ ಮಸೀದಿ ಮಾದರಿಯಲ್ಲಿ ಕೆಡವಬೇಕು ಎಂದು ಹೇಳಿದ್ದರು. ಈ ಕಾರಣಕ್ಕೆ ಪೊಲೀಸರು ಇದೀಗ ಅವರ ವಿರುದ್ಧ ಸ್ವಯಂ ಪ್ರೇರಿತ ಪ್ರಕರಣ ದಾಖಲು ಮಾಡಿದ್ದಾರೆ.