ಬೆಳಗಾವಿ : ಬೆಂಗಳೂರಿನ ಕನ್ನಡ ಜನಶಕ್ತಿ ಕೇಂದ್ರ ಕೊಡಮಾಡುವ 2025ನೇ ಸಾಲಿನ ‘ಕುವೆಂಪು ಸಾಹಿತ್ಯ’ ಪ್ರಶಸ್ತಿಗೆ ಬೆಳಗಾವಿ ಜಿಲ್ಲೆಯ ಹಿರಿಯ ಸಾಹಿತಿ ಡಾ.ಗುರುಪಾದ ಮರಿಗುದ್ದಿ ಅವರನ್ನು ಆಯ್ಕೆ ಮಾಡಲಾಗಿದೆ.

ಬೆಂಗಳೂರಿನಲ್ಲಿ ಫೆ.2ರಂದು ಕನ್ನಡ ಸಾಹಿತ್ಯ ಪರಿಷತ್ತಿನ ಕುವೆಂಪು ಸಭಾಂಗಣದಲ್ಲಿ ನಡೆಯಲಿರುವ ಕಾರ್ಯಕ್ರಮ ದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ.ಪುರುಷೋತ್ತಮ ಬಿಳಿಮಲೆ ಅವರು ಪ್ರಶಸ್ತಿ ಪ್ರದಾನ ಮಾಡುವರು. ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಅಧ್ಯಕ್ಷ ಡಾ.ವೂಡೇ ಪಿ.ಕೃಷ್ಣ ಅವರು ಸಮಾರಂಭದ ಅಧ್ಯಕ್ಷತೆ ವಹಿಸುವರು. ಹಿರಿಯ ಕವಿ ಪಿ. ಮಲ್ಲಿಕಾರ್ಜುನಪ್ಪ ಉಪಸ್ಥಿತರಿರುವರು.