ಬೆಂಗಳೂರು : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂ ಜೆ) ದ ಅಭಿಮಾನಿ ಪ್ರಕಾಶನ ವಾರ್ಷಿಕ ಪ್ರಶಸ್ತಿ ಪ್ರಕಟಿಸಿದೆ.
ಕಳೆದ ಎರಡೂವರೆ ದಶಕಗಳಿಂದ ಚಿತ್ರದುರ್ಗದಲ್ಲಿ ಪತ್ರಕರ್ತರಾಗಿರುವ ಅವರು ವಿಶ್ವವಾಣಿ ಪತ್ರಿಕೆಯಲ್ಲಿ ವರದಿಗಾರರಾಗಿ ಸೇವೆ ಸಲ್ಲಿಸಿ, ಈಗ ಝೀ ಕನ್ನಡ ವಾಹಿನಿ ಜಿಲ್ಲಾ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಈ ನಗರವಾಣಿ ಎಂಬ ಪತ್ರಿಕೆಯನ್ನು ಸಹ ಮುನ್ನಡೆಸುತ್ತಿದ್ದಾರೆ. ಮಾಲತೇಶ ಅರಸ್ ಅವರು ಪತ್ರಿಕೋದ್ಯಮಕ್ಕೆ ಸಲ್ಲಿಸಿರುವ ಸೇವೆಯನ್ನು ಗಮನಿಸಿ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ಪತ್ರಿಕಾ ಮಾಧ್ಯಮದ ಜೊತೆಗೆ ನ್ಯಾಯವಾದಿಯಾಗಿಯೂ ಅವರು ಸೇವೆ ಸಲ್ಲಿಸುತ್ತಿದ್ದಾರೆ. ಬಹುಮುಖಿ ವ್ಯಕ್ತಿತ್ವ ಹೊಂದಿರುವ ಮಾಲತೇಶ್ ಅರಸ್ ಅವರು ನಾಡಿನೆಲ್ಲೆಡೆ ಚಿರಪರಿಚಿತರಾಗಿದ್ದಾರೆ.