ಬೆಂಗಳೂರು: ನಿಮಗೆ ತಾಕತ್ತು ಇದ್ದರೆ ನಿಮ್ಮ ಪಕ್ಷದ ಮುಂದಿನ ಮುಖ್ಯಮಂತ್ರಿ ಯಾರು ಎಂದು ಹೇಳಿ ಎಂದು ಕಾಂಗ್ರೆಸ್ ಶಾಸಕ ಮತ್ತು ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಸವಾಲು ಹಾಕಿದ್ದಾರೆ.

ಕಾಂಗ್ರೆಸ್ ಪಕ್ಷದ ವತಿಯಿಂದ ಮುಂದಿನ ಪ್ರಧಾನಿ ಯಾರು ಎಂಬುದನ್ನು ಹೇಳಿ ಎಂದಿರುವ ಯಡಿಯೂರಪ್ಪ ಅವರಿಗೆ ಅಥಣಿ ಶಾಸಕ ಲಕ್ಷ್ಮಣ ಸವದಿ ತಿರುಗೇಟು ನೀಡಿದ್ದು ಈ ವಯಸ್ಸಿನಲ್ಲಿ ನೀವು ಸವಾಲು ಹಾಕಿದ್ದೀರಿ, ನಿಮಗೆ ತಾಕತ್ತು ಇದ್ದರೆ ಬಿಜೆಪಿಯ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿ ಯಾರೆಂದು ಹೇಳಿ ? ತಾಕತ್ತು ಇದ್ದರೆ ಮೋದಿ ಬಳಿಕ ಪ್ರಧಾನಿ ಅಭ್ಯರ್ಥಿ ಯಾರು ಎಂದು ಹೇಳಿ ? ಬೇರೆ ಪಕ್ಷದವರನ್ನು ಕೇಳುವ ನೈತಿಕತೆ ನಿಮಗೆ ಇಲ್ಲ ಎಂದು ಲಕ್ಷ್ಮಣ ಸವದಿ ಅವರು ಯಡಿಯೂರಪ್ಪ ಅವರನ್ನು ಉದ್ದೇಶಿಸಿ ಕಿಡಿ ಕಾರಿದ್ದಾರೆ.