Join The Telegram | Join The WhatsApp |
ಬೆಂಗಳೂರು-
ವಿಧಾನಮಂಡಲದ ಬಜೆಟ್ ಅಧಿವೇಶನವನ್ನು ಫೆಬ್ರವರಿ 10ರಿಂದ ನಡೆಸಲು ಶುಕ್ರವಾರ ನಡೆದ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಹಾಗೂ ಫೆಬ್ರವರಿ 17ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯದ್ ಬಜೆಟ್ ಮಂಡಿಸಲಿದ್ದಾರೆ.
ಸಂಪುಟ ಸಭೆಯ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಅವರು, ಫೆಬ್ರವರಿ 10ರಂದು ರಾಜ್ಯಪಾಲರು ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಫೆಬ್ರವರಿ16ರ ವರೆಗೂ ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ ನಡೆಯಲಿದೆ. ಫೆಬ್ರವರಿ 17ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯದ ಬಜೆಟ್ ಮಂಡಿಸುವ ಸಾಧ್ಯತೆ ಇದೆ’ ಎಂದು ತಿಳಿಸಿದರು.
ಅಧಿವೇಶನದ ಕೊನೆಯ ದಿನವನ್ನು ನಿರ್ಧರಿಸಿಲ್ಲ. ವಿಧಾನಮಂಡಲದ ಉಭಯ ಸದನಗಳ ಕಲಾಪ ಸಲಹಾ ಸಮಿತಿಗಳ ಸಭೆ ನಡೆಸಿ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದರು.
Join The Telegram | Join The WhatsApp |